WPL 2026: ಒಂದೇ ಓವರ್ನಲ್ಲಿ 2 ಪ್ರಮುಖ ವಿಕೆಟ್ ಉರುಳಿಸಿದ ಟಗರು ಪುಟ್ಟಿ; ವಿಡಿಯೋ ನೋಡಿ
RCB vs UPW WPL 2026: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್ಸಿಬಿ, ಶ್ರೇಯಾಂಕ ಪಾಟೀಲ್ ಅವರ ಸ್ಫೋಟಕ ಬೌಲಿಂಗ್ ನೆರವಿನಿಂದ ಯುಪಿ ಬ್ಯಾಟರ್‌ಗಳನ್ನು ಕಟ್ಟಿಹಾಕಿದೆ. ಶ್ರೇಯಾಂಕ ಮೆಗ್ ಲ್ಯಾನಿಂಗ್ ಮತ್ತು ಫೋಬೆ ಲಿಚ್‌ಫೀಲ್ಡ್ ವಿಕೆಟ್ ಪಡೆದು ತಂಡದ ಮೇಲುಗೈಗೆ ಕಾರಣರಾದರು.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್‌ನ 5ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಯುಪಿ ತಂಡ ಆರ್ಸಿಬಿಯ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ತಂಡದ ಪ್ರಮುಖ ಬ್ಯಾಟರ್ಗಳು ಈಗಾಗಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ.
ಅದರಲ್ಲೂ ಪಂದ್ಯದ 8ನೇ ಓವರ್ನಲ್ಲಿ ಬೌಲಿಂಗ್ಗೆ ಇಳಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಮೊದಲ ಎಸೆತದಲ್ಲೇ ಯುಪಿ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರ ವಿಕೆಟ್ ಪಡೆದರು. ಈ ವಿಕೆಟ್ನ ಶ್ರೇಯ ಅತ್ಯದ್ಭುತ ಫಿಲ್ಡಿಂಗ್ ಮಾಡಿದ ರಾಧಾ ಯಾದವ್ಗೂ ಸಲ್ಲಬೇಕು. ಆ ನಂತರ ಅದೇ ಓವರ್ನ ಕೊನೆಯ ಎಸೆತದಲ್ಲಿ ಯುಪಿ ತಂಡದ ಬ್ಯಾಟಿಂಗ್ ಜೀವಾಳ ಎನಿಸಿಕೊಂಡಿರುವ ಫೋಬೆ ಲಿಚ್‌ಫೀಲ್ಡ್ ಅವರನ್ನು ಶ್ರೇಯಾಂಕ ಬಲಿ ಪಡೆದರು.

