VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!

Updated on: Jan 12, 2026 | 8:58 AM

Womens Premier League Records: 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೀಪ್ತಿ ಶರ್ಮಾ 28 ರನ್ ನೀಡುವ ಮೂಲಕ ಈ ಹೀನಾಯ ದಾಖಲೆ ಬರೆದಿದ್ದರು. ಇದೀಗ 32 ರನ್​ ಚಚ್ಚಿಸಿಕೊಳ್ಳುವ ಮೂಲಕ ಸ್ನೇಹ್ ರಾಣಾ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಒಂದು ಓವರ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ.

ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್​ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್​ನಲ್ಲಿ ದಾಳಿಗಿಳಿದ ರಾಣಾ ಎಸೆತಗಳಿಗೆ ಸೋಫಿ 4,4,6,6,6,6 ಉತ್ತರ ನೀಡಿದ್ದಾರೆ.

ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಒಂದೇ ಓವರ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸೋಫಿ ಡಿವೈನ್ ತಮ್ಮದಾಗಿಸಿಕೊಂಡಿದ್ದಾರೆ.

ಅತ್ತ ಸ್ನೇಹ್ ರಾಣಾ ವುಮೆನ್ಸ್ ಪ್ರೀಮಿಯರ್​ ಲೀಗ್​ನಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಬಿಟ್ಟು ಕೊಟ್ಟ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ. ಇದಕ್ಕೂ ಮುನ್ನ ಈ ಬೇಡದ ದಾಖಲೆ ಯುಪಿ ವಾರಿಯರ್ಸ್ ತಂಡದ ದೀಪ್ತಿ ಶರ್ಮಾ ಹೆಸರಿನಲ್ಲಿತ್ತು.

2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೀಪ್ತಿ ಶರ್ಮಾ 28 ರನ್ ನೀಡುವ ಮೂಲಕ ಈ ಹೀನಾಯ ದಾಖಲೆ ಬರೆದಿದ್ದರು. ಇದೀಗ 32 ರನ್​ ಚಚ್ಚಿಸಿಕೊಳ್ಳುವ ಮೂಲಕ ಸ್ನೇಹ್ ರಾಣಾ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡದಿ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 209 ರನ್​ ಕಲೆಹಾಕಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ಗಳಿಸಿ 4 ರನ್​ಗಳಿಂದ ಸೋಲೊಪ್ಪಿಕೊಂಡಿತು.