VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
Delhi Capitals Women vs Gujarat Giants Women: 20ನೇ ಓವರ್ನ ಮೊದಲ ಎಸೆತದಲ್ಲಿ ಸೋಫಿ ಡಿವೈನ್ ನೀಡಿದ್ದು ಕೇವಲ 1 ರನ್ ಮಾತ್ರ. ಇನ್ನು ಎರಡನೇ ಎಸೆತದಲ್ಲಿ ಜೆಮಿಮಾ ರೊಡ್ರಿಗಸ್ ವಿಕೆಟ್ ಕಬಳಿಸಿದರು. ಮೂರನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. ನಾಲ್ಕನೇ ಎಸೆತದಲ್ಲಿ ಮರಿಝನ್ನೆ ಕಪ್ ಒಂದು ರನ್ ಕಲೆಹಾಕಿದರು. ಐದನೇ ಎಸೆತದಲ್ಲಿ ಲಾರಾ ವೊಲ್ಫೋರ್ಟ್ ವಿಕೆಟ್ ಪಡೆದರು. ಆರನೇ ಎಸೆತದಲ್ಲಿ ಯಾವುದೇ ರನ್ ನೀಡದೇ ಗುಜರಾತ್ ಜೈಂಟ್ಸ್ ತಂಡಕ್ಕೆ 4 ರನ್ಗಳ ರೋಚಕ ಜಯ ತಂದುಕೊಟ್ಟರು.
ಗುಜರಾತ್ ಜೈಂಟ್ಸ್ ತಂಡದಿಂದ 210 ರನ್ಗಳ ಗುರಿ… ಕೊನೆಯ ಮೂರು ಓವರ್ಗಳಲ್ಲಿ 48 ರನ್ಗಳ ಅವಶ್ಯಕತೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು 18ನೇ ಓವರ್ನಲ್ಲಿ ಕಲೆಹಾಕಿದ್ದು ಬರೋಬ್ಬರಿ 19 ರನ್ಗಳು. 19ನೇ ಓವರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ಗಳಿಂದ ಮೂಡಿಬಂದ ಸ್ಕೋರ್ ಬರೋಬ್ಬರಿ 22 ರನ್ಗಳು. ಅದರಂತೆ ಅಂತಿಮ ಓವರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೇವಲ 7 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿದದ್ದು ಲಾರಾ ವುಲ್ಫರ್ಟ್ ಹಾಗೂ ಜೆಮಿಮಾ ರೊಡ್ರಿಗಸ್. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಖಚಿತ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈ ಹಂತದಲ್ಲಿ ದಾಳಿಗಿಳಿದ ಅನುಭವಿ ಆಟಗಾರ್ತಿ ಸೋಫಿ ಡಿವೈನ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.
20ನೇ ಓವರ್ನ ಮೊದಲ ಎಸೆತದಲ್ಲಿ ಸೋಫಿ ಡಿವೈನ್ ನೀಡಿದ್ದು ಕೇವಲ 1 ರನ್ ಮಾತ್ರ. ಇನ್ನು ಎರಡನೇ ಎಸೆತದಲ್ಲಿ ಜೆಮಿಮಾ ರೊಡ್ರಿಗಸ್ ವಿಕೆಟ್ ಕಬಳಿಸಿದರು. ಮೂರನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. ನಾಲ್ಕನೇ ಎಸೆತದಲ್ಲಿ ಮರಿಝನ್ನೆ ಕಪ್ ಒಂದು ರನ್ ಕಲೆಹಾಕಿದರು. ಐದನೇ ಎಸೆತದಲ್ಲಿ ಲಾರಾ ವುಲ್ಫರ್ಟ್ ವಿಕೆಟ್ ಪಡೆದರು. ಆರನೇ ಎಸೆತದಲ್ಲಿ ಯಾವುದೇ ರನ್ ನೀಡದೇ ಗುಜರಾತ್ ಜೈಂಟ್ಸ್ ತಂಡಕ್ಕೆ 4 ರನ್ಗಳ ರೋಚಕ ಜಯ ತಂದುಕೊಟ್ಟರು.
ಈ ಮೂಲಕ ಗುಜರಾತ್ ಜೈಂಟ್ಸ್ ತಂಡವು ಸೋಲುವ ಪಂದ್ಯವನ್ನು ಗೆಲ್ಲುವ ಮೂಲಕ 2 ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗೆಲ್ಲಬಹುದಾಗಿದ್ದ ಮ್ಯಾಚ್ನಲ್ಲೂ ಸೋತಿದೆ.

