VIDEO: ಶೂಟ್ ಮಾಡ್ಬೇಕಾ… ಬವುಮಾ ಬೊಂಬಾಟ್ ಸೆಲೆಬ್ರೇಷನ್
WTC Final 2025: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 212 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ 138 ರನ್ಗಳಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 207 ರನ್ಗಳಿಸಿತತು. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ 282 ರನ್ಗಳ ಗುರಿ ನೀಡಿದ್ದರು.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅದು ಕೂಡ 5 ವಿಕೆಟ್ಗಳ ಭರ್ಜರಿ ಜಯದೊಂದಿಗೆ ಎಂಬುದು ವಿಶೇಷ. ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದ ಗೆಲುವಿನ ಬಳಿಕ ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಸೌತ್ ಆಫ್ರಿಕಾ ತಂಡಕ್ಕೆ ಟ್ರೋಫಿಯನ್ನು ಹಸ್ತಾಂತರಿಸಿದ್ದರು.
ಅತ್ತ ಟ್ರೋಫಿ ಸ್ವೀಕರಿಸಿದ ಬಳಿಕ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಗನ್ಮ್ಯಾನ್ ಸೆಲೆಬ್ರೇಷನ್ ಮಾಡುವ ಮೂಲಕ ಗಮನ ಸೆಳೆದರು. ಮೇಸ್ ಟ್ರೋಫಿಯನ್ನು ಹೆಗಲೇರಿಸಿದ ಬವುಮಾ ಶೂಟ್ ಮಾಡುವುದನ್ನು ಅಣಕಿಸುತ್ತಾ ಸಂಭ್ರಮಿಸಿದರು. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 212 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ 138 ರನ್ಗಳಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 207 ರನ್ಗಳಿಸಿತತು. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ 282 ರನ್ಗಳ ಗುರಿ ನೀಡಿದ್ದರು. ಈ ಬೆನ್ನತ್ತಿರುವ ಸೌತ್ ಆಫ್ರಿಕಾ ತಂಡವು 5 ವಿಕೆಟ್ ಕಳೆದುಕೊಂಡು 282 ರನ್ಗಳಿಸಿ ಭರ್ಜರಿ ಜಯ ಸಾಧಿಸಿದೆ.
ಈ ಮೂಲಕ 27 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಸೌತ್ ಆಫ್ರಿಕಾ ತಂಡ ನೀಗಿಸಿಕೊಂಡಿದೆ. ಇದಕ್ಕೂ ಮುನ್ನ ಸೌತ್ ಆಫ್ರಿಕಾ 1998 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿದ್ದರು. ಇದೀಗ ಮತ್ತೊಮ್ಮೆ ಐಸಿಸಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

