ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!

Edited By:

Updated on: May 18, 2026 | 12:20 PM

ಬೇಸಿಗೆಯ ಪರಿಣಾಮವಾಗಿ ಉತ್ತರ ಕರ್ನಾಟಕದ ಹಲವೆಡೆ ನೀರಿನ ಅಭಾವ ಎದುರಾಗಿದ್ದು, ಜಿಲ್ಲೆಯಾದ್ಯಂತ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಿದೆ. ಬಂಡಳ್ಳಿ ಗ್ರಾಮದ ನಿವಾಸಿಗಳು ತಮ್ಮ ಮೂಲಭೂತ ಸೌಕರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಪ್ರತಿಭಟನೆಗೆ ಇಳಿದಿದ್ದಾರೆ. ಯಾದಗಿರಿ ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿ, ಮೇ 18: ಬೇಸಿಗೆಯ ಪರಿಣಾಮವಾಗಿ ಉತ್ತರ ಕರ್ನಾಟಕದ ಹಲವೆಡೆ ನೀರಿನ ಅಭಾವ ಎದುರಾಗಿದ್ದು, ಜಿಲ್ಲೆಯಾದ್ಯಂತ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಿದೆ. ಬಂಡಳ್ಳಿ ಗ್ರಾಮದ ನಿವಾಸಿಗಳು ತಮ್ಮ ಮೂಲಭೂತ ಸೌಕರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಪ್ರತಿಭಟನೆಗೆ ಇಳಿದಿದ್ದಾರೆ. ಯಾದಗಿರಿ ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪಂಚಾಯತಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಕೊರತೆಯಿಂದಾಗಿ ತಮ್ಮ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ. ವೃದ್ಧಾಪ್ಯದಲ್ಲಿ ನೀರಿಗಾಗಿ ದೂರದ ಪ್ರದೇಶಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಹಿರಿಯ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us