ಯುವಕನಿಗೆ ಬೈಕ್ ಡಿಕ್ಕಿ: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪಿಎಸ್ಐ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೆಂಭಾವಿ ಪೊಲೀಸ್ ಠಾಣೆಯ ಪಿಎಸ್ಐ ಅಮೋಜ್ ಕಾಂಬ್ಳೆ ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ. ಪಿಎಸ್ಐ ಅವರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯಾದಗಿರಿ, ಫೆಬ್ರವರಿ 20: ಯುವಕನಿಗೆ ಬೈಕ್ ಡಿಕ್ಕಿ ಹೊಡಿದ (accident) ಪರಿಣಾಮ ಗಂಭೀರ ಗಾಯಗೊಂಡು ನರಳಾಡಿರುವಂತಹ ಘಟನೆ ನಡೆದಿದ್ದು, ಈ ವೇಳೆ ಕೆಂಭಾವಿ ಪೊಲೀಸ್ ಠಾಣೆಯ ಪಿಎಸ್ಐ ಅಮೋಜ್ ಕಾಂಬ್ಳೆ ಯುವಕನನ್ನು ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.