AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಅಮೀನ್​ ಸಾಬ್​
| Edited By: |

Updated on: Mar 11, 2026 | 4:57 PM

Share

ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಯಾದಗಿರಿ ಜಿಲ್ಲೆಯಲ್ಲಿ ಚಿನ್ನ ಹಾಗೂ ಇತರೆ ಖನಿಜ ನಿಕ್ಷೇಪಗಳಿಗಾಗಿ ಮಹತ್ವದ ಶೋಧ ಕಾರ್ಯ ಆರಂಭಿಸಿದೆ. ಗುರುಮಠಕಲ್ ತಾಲ್ಲೂಕಿನ ಕಂದಕೂರು, ಎಲ್ಹೇರಿ ಭಾಗದಲ್ಲಿ ಮಾರ್ಚ್ 31ರ ವರೆಗೆ ಹೆಲಿಕಾಪ್ಟರ್ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಮೀಕ್ಷೆ ನಡೆಸಲಾಗುತ್ತಿದೆ. ಇದು ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಹೊಸ ಭರವಸೆ ಮೂಡಿಸಿದೆ.

ಯಾದಗಿರಿ, ಮಾರ್ಚ್​​ 11: ಜಿಲ್ಲೆಯ ಭೂಗರ್ಭದಲ್ಲಿ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯ ಆರಂಭವಾಗಿದೆ. ಚಿನ್ನ ಸೇರಿದಂತೆ ವಿವಿಧ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಜಿಲ್ಲೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಈ ಸಮೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಹೆಲಿಕಾಪ್ಟರ್ ಮೂಲಕ ಆಕಾಶದಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಮತ್ತು ಎಲ್ಹೇರಿ ಭಾಗಗಳಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಯುತ್ತಿದೆ. ಆಕಾಶದಲ್ಲಿ ನಿರಂತರವಾಗಿ ಹೆಲಿಕಾಪ್ಟರ್ ಹಾರುತ್ತಿರುವುದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಈ ಸಮೀಕ್ಷಾ ಕಾರ್ಯವನ್ನು ನಡೆಸಲು ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಂಡಿದ್ದು, ಮಾರ್ಚ್ 31ರವರೆಗೆ ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us