ಯಾದಗಿರಿ: ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಯಾದಗಿರಿ ಜಿಲ್ಲೆ ಮೂಲಕ ಹಾದುಹೋಗುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟ ಪರಿಣಾಮ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿತ್ತು. ಹೊಂಡಗಳಿಂದ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿದ್ದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯವಹಿಸಿದ್ದರು. ಹೀಗಾಗಿ ಬೇಸತ್ತ ಶಹಾಪುರ ತಾಲೂಕಿನ ಯುವಕರು ಸ್ವಂತ ಹಣ ಸಂಗ್ರಹಿಸಿ, ಸಿಮೆಂಟ್, ಮರಳು ತಂದು ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಯುವಕರ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಯಾದಗಿರಿ, ಅಕ್ಟೋಬರ್ 07: ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಬಳಿ ಹಲವು ವರ್ಷಗಳಿಂದ ಹದಗೆಟ್ಟ ಹೆದ್ದಾರಿಯನ್ನು ರಿಪೇರಿ ಮಾಡದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಪರಿಣಾಮ ಬೇಸತ್ತ ಯುವಕರು ರಸ್ತೆಯುದ್ದಕ್ಕೂ ನೂರಾರು ಗುಂಡಿಗಳುನ್ನು ತಾವೇ ಸ್ವತಃ ಮುಚ್ಚಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಉಂಟಾಗಿದ್ದ ಪರಿಣಾಮ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುತ್ತಿದ್ದರು. ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತಮ್ಮ ಸ್ವಂತ ಹಣದಲ್ಲಿ ಈ ಗುಂಡಿಗಳನ್ನು ಯುವಕರಪಡೆ ಮುಚ್ಚಿದೆ. ರಸ್ತಾಪುರ ಯುವಕರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
