ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಧರೆಗುರುಳಿದ ಶತಮಾನದ ಮರ
ಯಾದಗಿರಿ ಜಿಲ್ಲೆಯ ಸುರಪುರ, ಹುಣಸಗಿ, ಶಹಾಪುರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಶತಮಾನದ ಮರ ಒಂದು ಧರೆಗುರುಳಿದೆ.
ಯಾದಗಿರಿ: ಜಿಲ್ಲೆಯ ಸುರಪುರ, ಹುಣಸಗಿ, ಶಹಾಪುರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ಬಿರುಗಾಳಿ ಸಹಿತ ಭಾರೀ ಮಳೆ (heavy rain)ಗೆ ಶತಮಾನದ ಮರ ಒಂದು ಧರೆಗುರುಳಿದೆ. ಮರ ಬಿದ್ದಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಆಟೋ, ಬೈಕ್ಗಳು ಜಖಂ ಗೊಂಡಿವೆ. ಅದೇ ರೀತಿಯಾಗಿ ಮನೆಗಳ ಮೇಲಿನ ಪತ್ರಾಸ್ಗಳು ಹಾರಿ ಹೋಗಿವೆ. ಬಿರುಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಆಗಿದೆ ಎನ್ನುವುದು ಒಂದು ಕಡೆ ಆದರೆ, ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳು ಬಿರುಸುಗೊಳ್ಳವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
