AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಸೌಲಭ್ಯವಿಲ್ಲದೇ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು

ಬಸ್ ಸೌಲಭ್ಯವಿಲ್ಲದೇ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು

ಅಮೀನ್​ ಸಾಬ್​
| Edited By: |

Updated on: Sep 28, 2026 | 10:36 PM

Share

ಯಾದಗಿರಿ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ ಸೌಲಭ್ಯದ ಕೊರತೆಯಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಅಪಾಯಕಾರಿ ಖಾಸಗಿ ಗೂಡ್ಸ್ ಮತ್ತು ಟಂಟಂ ವಾಹನಗಳಲ್ಲಿ ಪ್ರಯಾಣಿಸುವ ಅನಿವಾರ್ಯತೆ ಉಂಟಾಗಿದೆ. ಸೈದಾಪುರ ಸುತ್ತಮುತ್ತಲ 20ಕ್ಕೂ ಹೆಚ್ಚು ಹಳ್ಳಿಗಳ ಮಕ್ಕಳು ಜೀವವನ್ನು ಪಣಕ್ಕಿಟ್ಟು ಶಿಕ್ಷಣಕ್ಕಾಗಿ ಪ್ರತಿದಿನ ಸಂಚರಿಸುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಯಾದಗಿರಿ, ಸೆಪ್ಟೆಂಬರ್​ 28: ರಾಜ್ಯ ಸರ್ಕಾರ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಯೋಜನೆಯನ್ನು ಜಾರಿಗೊಳಿಸಿದ್ದರೂ, ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಸರಿಯಾದ ಸಮಯಕ್ಕೆ ಸರ್ಕಾರಿ ಬಸ್‌ಗಳು ಬಾರದ ಕಾರಣ, ಯಾದಗಿರಿ ತಾಲೂಕಿನ ಸೈದಾಪುರ ಸುತ್ತಮುತ್ತಲಿನ ಸುಮಾರು 20ಕ್ಕೂ ಹೆಚ್ಚು ಹಳ್ಳಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸುವಂತಾಗಿದೆ. ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ತೆರಳುವ ಮಕ್ಕಳು ಸೈದಾಪುರ ಪಟ್ಟಣಕ್ಕೆ ಬರಬೇಕು. ಬೆಳಗ್ಗೆ 6 ರಿಂದ 9 ಗಂಟೆಯ ವೇಳೆಗೆ ಬಸ್ ಸೌಲಭ್ಯದ ಕೊರತೆಯಿಂದಾಗಿ ಖಾಸಗಿ ಗೂಡ್ಸ್ ವಾಹನಗಳು ಮತ್ತು ಟಂಟಂಗಳನ್ನು ಅವಲಂಬಿಸಿದ್ದಾರೆ. ಈ ವಾಹನಗಳ ಮೇಲೆ, ಕೆಳಗೆ ಹಾಗೂ ಅಕ್ಕಪಕ್ಕದಲ್ಲಿ ಜೋತುಬಿದ್ದು ಪ್ರಯಾಣಿಸುವ ಸ್ಥಿತಿ‌ ನಿರ್ಮಾಣವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದರೆ ಅನಾಹುತ ಕಟ್ಟಿಟ್ಟ ಬುತ್ತಿ. ಹೀಗಾಗಿ ಶಾಲಾ, ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್​ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಮೀನ್​ ಸಾಬ್​
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More