ಕರ್ನಾಟಕದ ಜನರೇ ಕಮಲ್ ಹಾಸನ್ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕನ್ನಡ ಭಾಷೆ ಕುರಿತು ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ ಕಮಲ್ ಹಾಸನ್ ಅವರು ಸದ್ಯಕ್ಕಂತೂ ಕ್ಷಮೆ ಕೇಳಲು ಸಿದ್ಧರಿಲ್ಲ. ತಾವು ನಟಿಸಿದ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ಕೊಡಬೇಕು ಎಂದು ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬಗ್ಗೆ ಸಂಸದ ಯದುವೀರ್ ಒಡೆಯರ್ ಮಾತನಾಡಿದ್ದಾರೆ.
ಕನ್ನಡದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿರುವ ನಟ ಕಮಲ್ ಹಾಸನ್ (Kamal Haasan) ಅವರು ಸದ್ಯಕ್ಕಂತೂ ಕ್ಷಮೆ ಕೇಳಲು ಸಿದ್ಧರಿಲ್ಲ. ತಮ್ಮ ‘ಥಗ್ ಲೈಫ್’ (Thug Life) ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ಕೊಡಬೇಕು ಎಂದು ಅವರು ಕೋರ್ಟ್ ಮೊರೆ ಹೋಗಿದ್ದಾರೆ. ‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿರುವ ಅವರ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮೈಸೂರು ಸಂಸದ ಯದುವೀರ್ ಒಡೆಯರ್ (Yaduveer Wadiyar) ಅವರು ಮಾತನಾಡಿದ್ದಾರೆ. ‘ಕಮಲ್ ಹಾಸನ್ಗೆ ಜನರು ಉತ್ತರ ಕೊಡಬೇಕು. ಜನರೇ ಸಿನಿಮಾವನ್ನು ಬಹಿಷ್ಕಾರ ಮಾಡಬೇಕಿದೆ. ಆ ಮೂಲಕ ಪಾಠ ಕಲಿಸಬೇಕು’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
