ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್

Updated on: Jun 03, 2025 | 10:19 PM

ಕನ್ನಡ ಭಾಷೆ ಕುರಿತು ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ ಕಮಲ್ ಹಾಸನ್ ಅವರು ಸದ್ಯಕ್ಕಂತೂ ಕ್ಷಮೆ ಕೇಳಲು ಸಿದ್ಧರಿಲ್ಲ. ತಾವು ನಟಿಸಿದ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ಕೊಡಬೇಕು ಎಂದು ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬಗ್ಗೆ ಸಂಸದ ಯದುವೀರ್ ಒಡೆಯರ್ ಮಾತನಾಡಿದ್ದಾರೆ.

ಕನ್ನಡದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿರುವ ನಟ ಕಮಲ್ ಹಾಸನ್ (Kamal Haasan) ಅವರು ಸದ್ಯಕ್ಕಂತೂ ಕ್ಷಮೆ ಕೇಳಲು ಸಿದ್ಧರಿಲ್ಲ. ತಮ್ಮ ‘ಥಗ್ ಲೈಫ್’ (Thug Life) ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ಕೊಡಬೇಕು ಎಂದು ಅವರು ಕೋರ್ಟ್ ಮೊರೆ ಹೋಗಿದ್ದಾರೆ. ‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿರುವ ಅವರ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮೈಸೂರು ಸಂಸದ ಯದುವೀರ್ ಒಡೆಯರ್ (Yaduveer Wadiyar) ಅವರು ಮಾತನಾಡಿದ್ದಾರೆ. ‘ಕಮಲ್ ಹಾಸನ್​ಗೆ ಜನರು ಉತ್ತರ ಕೊಡಬೇಕು. ಜನರೇ ಸಿನಿಮಾವನ್ನು ಬಹಿಷ್ಕಾರ ಮಾಡಬೇಕಿದೆ. ಆ ಮೂಲಕ ಪಾಠ ಕಲಿಸಬೇಕು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.