ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಹಿರಿಯ ನಟಿ ಜಯಮಾಲಾ ಅವರ ಮಗಳು ಸೌಂದರ್ಯಾ ಜಯಮಾಲಾ ವಿವಾಹ ಇಂದು (ಫೆ.7) ನಡೆಯುತ್ತಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಇರುವ ಗಾಯತ್ರಿ ಗ್ರ್ಯಾಂಡ್ನಲ್ಲಿ ಮದುವೆ ನಡೆಯುತ್ತಿದ್ದು, ಐಪಿಎಸ್ ಅಧಿಕಾರಿ ರಾಮಚಂದ್ರ ಅವರ ಪುತ್ರ ರುಷಭ್ ಅವರನ್ನು ಸೌಂದರ್ಯ ವರಿಸುತ್ತಿದ್ದಾರೆ. ಈ ವಿವಾಹ ಸಮಾರಂಭಕ್ಕೆ ಸ್ಯಾಂಡಲ್ವುಡ್ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ.
ನಟಿ ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಾಕ್ಷಿ ಆಗಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ವಿವಾಹಕ್ಕೆ ಯಶ್, ರಾಧಿಕಾ ಪಂಡಿತ್, ಕಿಚ್ಚ ಸುದೀಪ್, ಉಪೇಂದ್ರ ಸೇರಿದಂತೆ ಹಲವರು ಬಂದು ವಧು-ವರರಿಗೆ ಆಶೀರ್ವಾದ ಮಾಡಿದ್ದಾರೆ. ಮದುವೆಗೆ ‘ರಾಕಿಂಗ್ ಸ್ಟಾರ್’ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಆಗಮಿಸಿದ ವಿಡಿಯೋ ಇಲ್ಲಿದೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳ ನಡುವೆ ಯಶ್ ಅವರು ಬಿಡುವು ಮಾಡಿಕೊಂಡು ಈ ಮದುವೆಗೆ ಆಗಮಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.