‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಖಾಸಗಿ ಜೆಟ್​ನಲ್ಲಿ ತೆರಳುತ್ತಿರುವ ಫೋಟೋ ವೈರಲ್​ ಆಗಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

TV9kannada Web Team

| Edited By: Rajesh Duggumane

Mar 31, 2022 | 7:35 PM

‘ಕೆಜಿಎಫ್​ ಚಾಪ್ಟರ್​ 2’ ಚಿತ್ರ (KGF Chapter 2 Movie) ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಕಾರಣಕ್ಕೆ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಮೋಷನ್​ ನೀಡೋಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾನಾ ರಾಜ್ಯಗಳಿಗೆ ತೆರೆಳಿ ‘ಕೆಜಿಎಫ್​’ ಸಿನಿಮಾದ ಪ್ರಮೋಷನ್ ಮಾಡಲಾಗುತ್ತಿದೆ. ಹಿಂದಿಯಲ್ಲಿ ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲಾಗುತ್ತಿದೆ. ಈ ಕಾರಣಕ್ಕೆ ಉತ್ತರ ಭಾರತದಲ್ಲಿ ಚಿತ್ರಕ್ಕೆ ಹೆಚ್ಚು ಪ್ರಚಾರ ಕೊಡುವ ಅನಿವಾರ್ಯತೆ ಇದೆ. ಹೀಗಾಗಿ, ‘ಕೆಜಿಎಫ್​ 2’ ತಂಡ ದೆಹಲಿಗೆ ತೆರಳಿದೆ. ಯಶ್ (Yash)​, ಶ್ರೀನಿಧಿ ಶೆಟ್ಟಿ ಮೊದಲಾದವರು ಖಾಸಗಿ ಜೆಟ್​ನಲ್ಲಿ ತೆರಳುತ್ತಿರುವ ಫೋಟೋ ವೈರಲ್​ ಆಗಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಈ ಚಿತ್ರಕ್ಕೆ ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ಈಗಾಗಲೇ ಸಿದ್ಧತೆ ನಡೆದಿದೆ.

ಇದನ್ನೂ ಓದಿ: ರೀ-ರಿಲೀಸ್​ ಆಗ್ತಿದೆ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ; ಈ ಆಫರ್​ ಸಿಗೋದು ಕೆಲವೇ ದಿನಗಳು ಮಾತ್ರ

KGF Chapter 2: ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಕೆಜಿಎಫ್​ ಚಾಪ್ಟರ್​ 2’; ಚಿತ್ರದ ಅವಧಿ ಎಷ್ಟು?

Follow us on

Click on your DTH Provider to Add TV9 Kannada