‘ಟಾಕ್ಸಿಕ್’ ಸಿನಿಮಾನಲ್ಲಿ ಶಾರುಖ್ ಖಾನ್ ನಟಿಸ್ತಾರಾ? ಯಶ್ ಕೊಟ್ಟರು ಉತ್ತರ
Yash-Shah Rukh Khan: ನಟ ಯಶ್ರ ಮುಂದಿನ ಸಿನಿಮಾ ‘ಟಾಕ್ಸಿಕ್’ನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸ್ವತಃ ಯಶ್ ಸ್ಪಷ್ಟನೆ ನೀಡಿದ್ದಾರೆ.
ನಟ ಯಶ್ (Yash) ಬಹಳ ದಿನಗಳ ಬಳಿಕ ಮಾಧ್ಯಮದವರೊಡನೆ ಮುಖಾಮುಖಿಯಾಗಿದ್ದಾರೆ. ಗೆಳೆಯ, ಫಿಟ್ನೆಸ್ ಟ್ರೈನರ್ ಕಿಟ್ಟಿ ಅವರ ಹೊಸ ಜಿಮ್ ಉದ್ಘಾಟನೆಗೆ ಆಗಮಿಸಿದ್ದ ನಟ ಯಶ್, ಮಾಧ್ಯಮದವರ ಪ್ರಶ್ನೆಗಳಿಗೆ ಚುಟುಕಾಗಿ ಉತ್ತರ ನೀಡಿದರು. ಸಿನಿಮಾ, ರಾಜಕೀಯ, ಕನ್ನಡ ಚಿತ್ರರಂಗ, ಹೊಸ ನಟರು, ಸ್ಯಾಟಲೈಟ್ ಹಕ್ಕುಗಳು, ಕುಟುಂಬ ಇನ್ನೂ ಕೆಲವು ವಿಷಯಗಳ ಬಗ್ಗೆ ಯಶ್ ಮಾತನಾಡಿದ್ದಾರೆ. ಯಶ್ರ ಮುಂದಿನ ಸಿನಿಮಾ ‘ಟಾಕ್ಸಿಕ್’ನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ತುಸು ಗಟ್ಟಿಯಾಗಿಯೇ ಹರಿದಾಡಿತ್ತು, ಈ ಬಗ್ಗೆ ಕೇಳಲಾದ ಪ್ರಶ್ನೆಗೆ ನೇರವಾಗಿ ‘ಅದೆಲ್ಲ ಸುಳ್ಳು, ಹಾಗೆಲ್ಲ ಏನೂ ಇಲ್ಲ. ಹಾಗೇನಾದರೂ ಇದ್ದರೆ ಖಂಡಿತ ನಾನೇ ಹೇಳುತ್ತೇನೆ’ ಎಂದಿದ್ದಾರೆ ಯಶ್. ಮಾತ್ರವಲ್ಲದೆ, ಯಶ್ ‘ಹನುಮಾನ್’ ಸರಣಿಯ ಮುಂದಿನ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದ್ದು ಆ ಬಗ್ಗೆಯೂ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

