AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ‘ಟಾಕ್ಸಿಕ್’ ಕ್ರೇಜ್: ಯಶ್ ಅಭಿಮಾನಿಗಳಿಂದ ಅದ್ಧೂರಿ ಸಂಭ್ರಮ

ಚಿಕ್ಕಬಳ್ಳಾಪುರದಲ್ಲಿ ‘ಟಾಕ್ಸಿಕ್’ ಕ್ರೇಜ್: ಯಶ್ ಅಭಿಮಾನಿಗಳಿಂದ ಅದ್ಧೂರಿ ಸಂಭ್ರಮ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 26, 2026 | 9:34 AM

Share

Toxic movie release in Chikkaballapur: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಯಶ್ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಬಾಲಾಜಿ ಚಿತ್ರಮಂದಿರದಲ್ಲಿ ಫ್ಯಾನ್ಸ್ ಶೋ ವೀಕ್ಷಿಸಲು ಬಂದ ಅಭಿಮಾನಿಗಳು ಪಟಾಕಿ ಸಿಡಿಸಿ, ತಮಟೆ ಬಾರಿಸಿ ಸಂಭ್ರಮಿಸಿದರು. ಚಿತ್ರಮಂದಿರದ ಎದುರು ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿದೆ.

ಚಿಕ್ಕಬಳ್ಳಾಪುರ, ಆಗಸ್ಟ್ 26: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಫ್ಯಾನ್ಸ್ ಶೋ ಪ್ರದರ್ಶನಗೊಂಡಿದ್ದು, ಸಿನಿಮಾ ವೀಕ್ಷಿಸಲು ಯಶ್ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಚಿತ್ರಮಂದಿರದ ಎದುರು ಬೃಹತ್ ಕಟೌಟ್‌ಗಳನ್ನು ಅಳವಡಿಸಿ, ಪಟಾಕಿ ಸಿಡಿಸಿ ಹಾಗೂ ತಮಟೆ ಬಾರಿಸುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು. ಫ್ಯಾನ್ಸ್ ಶೋ ಮುಕ್ತಾಯದ ಬಳಿಕ ಅಭಿಮಾನಿಗಳಿಗಾಗಿ ಅನ್ನಸಂತರ್ಪಣೆಯನ್ನೂ ಆಯೋಜಿಸಲಾಗಿದೆ.

ಟಾಕ್ಸಿಕ್​ ಸಿನಿಮಾ ರಿಲೀಸ್​ ಲೈವ್​ ಅಪ್ಡೇಟ್ಸ್​ಗೆ ಇಲ್ಲಿ ಕ್ಲಿಕ್​ ಮಾಡಿ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us