AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ನಿಧನ ನೋವಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಟ ಯಶ್​

ಅಭಿಮಾನಿಗಳ ನಿಧನ ನೋವಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಟ ಯಶ್​

ಮದನ್​ ಕುಮಾರ್​
|

Updated on: Jan 08, 2024 | 5:36 PM

Share

ಮೃತ ಅಭಿಮಾನಿಗಳಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಹಾಗೂ ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಲು ಸೊರಣಗಿ ಗ್ರಾಮಕ್ಕೆ ಯಶ್​ ತೆರಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಿದ ಅವರನ್ನು ನೋಡಲು ಜನರು ಮುಗಿಬಿದ್ದಿದ್ದಾರೆ.

ನಟ ಯಶ್​ ಅವರಿಗೆ ಹುಟ್ಟುಹಬ್ಬದ ದಿನವೇ (ಜನವರಿ 8) ಬೇಸರ ಆವರಿಸಿದೆ. ಅವರ ಬ್ಯಾನರ್​ ಕಟ್ಟುವಾಗ ಮೂವರು ಅಭಿಮಾನಿಗಳು (Yash Fans) ವಿದ್ಯುತ್​ ಶಾಕ್​ನಿಂದ ನಿಧನರಾಗಿರುವುದು ನೋವಿನ ಸಂಗತಿ. ಗದಗ ಜಿಲ್ಲೆಯ ಸೊರಣಗಿಯಲ್ಲಿ ಈ ಘಟನೆ ನಡೆದಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್​ (Yash) ಆಗಮಿಸಿದ್ದಾರೆ. ಬ್ಯಾಂಕಾಕ್​ನಲ್ಲಿ ನಡೆಯುತ್ತಿದ್ದ ‘ಟಾಕ್ಸಿಕ್​’ ಸಿನಿಮಾದ​ ಚಿತ್ರೀಕರಣಕ್ಕೆ ಬ್ರೇಕ್​ ಹಾಕಿ ಅವರು ಬಂದಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ( Hubli Airport) ತಲುಪಿದ ಅವರನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ಮೃತ ಅಭಿಮಾನಿಗಳಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಹಾಗೂ ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಲು ಸೊರಣಗಿ ಗ್ರಾಮಕ್ಕೆ ಯಶ್​ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More