ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್

Updated on: Jul 03, 2025 | 4:34 PM

ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಐಮ್ಯಾಕ್ಸ್ ಪರದೆ ಮೇಲೆ ಗ್ಲಿಂಪ್ಸ್ ಬಿತ್ತರ ಮಾಡಲಾಗಿದೆ. ಇದನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರಿಗೂ ಈ ಗ್ಲಿಂಪ್ಸ್ ಇಷ್ಟ ಆಗಿದೆ. ತುಂಬಾ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ರಣಬೀರ್ ಕಪೂರ್, ಯಶ್ (Yash), ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ (Ramayana Movie First Glimpse) ಬಿಡುಗಡೆ ಆಗಿದೆ. ಐಮ್ಯಾಕ್ಸ್ ಪರದೆ ಮೇಲೆ ಗ್ಲಿಂಪ್ಸ್ ಬಿತ್ತರ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದನ್ನು ನೋಡಿದ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರಿಗೂ ಈ ಗ್ಲಿಂಪ್ಸ್ ಇಷ್ಟ ಆಗಿದೆ. ಬಹಳ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿತೇಶ್ ತಿವಾರಿ ಅವರು ‘ರಾಮಾಯಣ’ (Ramayana) ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಪಾರ್ಟ್​ 2026ರ ದೀಪಾವಳಿಗೆ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More