ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ

Updated on: Jul 23, 2025 | 8:50 PM

ಆಗಸ್ಟ್ 1ರಂದು ‘ಕೊತ್ತಲವಾಡಿ’ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾವನ್ನು ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುಷ್ಪ ಅವರು ಮಾತನಾಡಿದರು. ಅವರ ವಿಡಿಯೋಗಳು ಸಖತ್ ವೈರಲ್ ಆಗುತ್ತಿವೆ. ಆ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಆಗಸ್ಟ್ 1ರಂದು ‘ಕೊತ್ತಲವಾಡಿ’ (Kothalavadi) ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾವನ್ನು ಯಶ್ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ಅವರು ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುಷ್ಪ ಅವರು ಮಾತನಾಡಿದರು. ಅವರ ವಿಡಿಯೋಗಳು ವೈರಲ್ ಆಗುತ್ತಿವೆ. ಆ ಕುರಿತು ಅವರು ಪ್ರತಿಕ್ರಿಯೆ ನೀಡಿದರು. ‘ನನಗೆ ನಟನೆ ಮಾಡೋಕೆ ಬರಲ್ಲ. ನಟನೆ ಎಷ್ಟು ಕಷ್ಟ ಎಂಬುದು ಯಶ್ (Yash) ಬಂದ್ಮೇಲೆ ನನಗೆ ಗೊತ್ತಾಗಿದ್ದು. ಯಶ್ ಸಾಕಷ್ಟು ಹೆಸರು ಮಾಡಿದ್ದಾನೆ. ಹೂವಿನ ಜೊತೆ ನಾರು ಹೋದಂತೆ ನನ್ನನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಕೆಲಸದ ಹುಡುಗರು ಮೊದಲು ನನಗೆ ಬಾಸ್ ಎನ್ನುತ್ತಿದ್ದರು. ಈಗ ಯಶ್​ಗೆ ಬಾಸ್ ಅಂತಾರೆ’ ಎಂದಿದ್ದಾರೆ ಪುಷ್ಪ ಅರುಣ್ ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More