ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ

Updated on: Jul 09, 2025 | 10:05 PM

‘ರಾಕಿಂಗ್ ಸ್ಟಾರ್’ ಯಶ್ ತಾಯಿ ಪುಷ್ಪ ಅರುಣ್​ಕುಮಾರ್ ಅವರು ‘ಕೊತ್ತಲವಾಡಿ’ ಸಿನಿಮಾ ಮೂಲಕ ನಿರ್ಮಾಪಕಿ ಆಗಿದ್ದಾರೆ. ಈ ಸಿನಿಮಾ ಕುರಿತು ಮಾತನಾಡುವಾಗ ಅನೇಕ ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ಹಾಗೂ ಯಶ್-ರಾಧಿಕಾ ಪಂಡಿತ್ ದಂಪತಿ ಬಗ್ಗೆ ಮಾತನಾಡಿದ್ದಾರೆ.

ಯಶ್ ತಾಯಿ ಪುಷ್ಪ ಅರುಣ್​ಕುಮಾರ್ (Pushpa Arun Kumar) ಅವರು ‘ಕೊತ್ತಲವಾಡಿ’ ಸಿನಿಮಾ ಮೂಲಕ ನಿರ್ಮಾಪಕಿ ಆಗಿದ್ದಾರೆ. ಈ ಸಿನಿಮಾ ಕುರಿತು ಮಾತನಾಡುವಾಗ ಅನೇಕ ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಪುಷ್ಪ ಅವರು ಮಾತನಾಡಿದ್ದಾರೆ. ‘ಯಶ್ (Yash) ನಮಗೆ ಸಿನಿಮಾ ವಿಚಾರದಲ್ಲಿ ಅನೇಕ ವಿಷಯ ಹೇಳಿಕೊಟ್ಟಿದ್ದಾನೆ. ನಾವು ಭಯ-ಭಕ್ತಿಯಿಂದ ಸಿನಿಮಾ ಮಾಡಬೇಕು. ನಮ್ಮ ಸೊಸೆ (Radhika Pandit) ಕೂಡ ಸ್ಟಾರ್. ಅವಳು ತುಂಬ ಹೆಸರು ಮಾಡಿದ್ದಾಳೆ. ಒಳ್ಳೊಳ್ಳೆಯ ಸಿನಿಮಾ ಕೊಟ್ಟಿದ್ದಾಳೆ. ಎಲ್ಲೋ ಇಂದು ಕಡೆ ಅವಳಿಗೆ ಕೆಟ್ಟ ಹೆಸರು ಬರಬಾರದು. ನಿಮ್ಮ ಅತ್ತೆ ಎಂಥಾ ಪಿಕ್ಚರ್ ಮಾಡಿದ್ದಾರೆ ನೋಡು ಅಂತ ಆಕೆಗೆ ಯಾರೂ ಹೇಳಬಾರದು’ ಎಂದಿದ್ದಾರೆ ಯಶ್ ತಾಯಿ ಪುಷ್ಪ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More