AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗ ಮತ್ತೊಂದು ಹಂತಕ್ಕೆ ಏರಲು ಹೀಗೆ ಮಾಡಬೇಕು: ಯಶ್ ತಾಯಿ ಪುಷ್ಪ ಪ್ಲ್ಯಾನ್

ಕನ್ನಡ ಚಿತ್ರರಂಗ ಮತ್ತೊಂದು ಹಂತಕ್ಕೆ ಏರಲು ಹೀಗೆ ಮಾಡಬೇಕು: ಯಶ್ ತಾಯಿ ಪುಷ್ಪ ಪ್ಲ್ಯಾನ್

ಮದನ್​ ಕುಮಾರ್​
|

Updated on: Aug 28, 2025 | 7:43 PM

Share

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಅವರು ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಈಗ ವಿತರಣೆಯಲ್ಲೂ ತೊಡಗಿಕೊಂಡಿದ್ದಾರೆ. ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರವನ್ನು ಅವರು ವಿತರಣೆ ಮಾಡಲು ಮುಂದಾಗಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಗಣೇಶ ಹಬ್ಬ ಆಚರಿಸಿದ ಬಳಿಕ ಪುಷ್ಪ ಅರುಣ್ ಕುಮಾರ್ ಮಾತನಾಡಿದರು.

ನಟ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ವಿತರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾವನ್ನು ಅವರು ವಿತರಣೆ ಮಾಡಲು ಮುಂದಾಗಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಗಣೇಶ ಹಬ್ಬ ಆಚರಿಸಿದ ಬಳಿಕ ಪುಷ್ಪ ಅರುಣ್ ಕುಮಾರ್ ಅವರು ಮಾತನಾಡಿದರು. ‘ಕಥೆ ಕಡೆಗೆ ಗಮನ ನೀಡಿ ನಾವೆಲ್ಲ ಒಳ್ಳೊಳ್ಳೆಯ ಸಿನಿಮಾ ಮಾಡೋಣ. ಒಳ್ಳೆಯ ಕೆಲಸ ಮಾಡೋಣ. ಎಲ್ಲರೂ ಮಾಡಬೇಕು. ನಾವೊಬ್ಬರೇ ಅಲ್ಲ. ಎಲ್ಲರೂ ಎಲ್ಲ ಕೆಲಸದಲ್ಲೂ ಭಾಗಿಯಾದರೆ ಕನ್ನಡ ಚಿತ್ರರಂಗ (Kannada Film Industry) ಒಂದು ಹಂತಕ್ಕೆ ಹೋಗಬಹುದು’ ಎಂದು ಪುಷ್ಪಾ ಅರುಣ್ ಕುಮಾರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More