ಭೂ ಒತ್ತುವರಿ ಆರೋಪ: ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ
ಹಾಸನದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರ ವಿರುದ್ಧ ಭೂ ಒತ್ತುವರಿ ಆರೋಪ ಇದೆ. ಲಕ್ಷ್ಮಮ್ಮ ಎಂಬುವವರ ಜಾಗದಲ್ಲಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಸಿದ್ದಾರೆ ಎನ್ನಲಾಗಿದೆ. ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದೇವರಾಜು ಅವರು ಪುಷ್ಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.
ಹಾಸನದಲ್ಲಿ ನಟ ಯಶ್ (Yash) ತಾಯಿ ಪುಷ್ಪಾ ಅವರ ವಿರುದ್ಧ ಭೂಒತ್ತುವರಿ ಆರೋಪ ಇದೆ. ಲಕ್ಷ್ಮಮ್ಮ ಎಂಬುವವರ ಜಾಗದಲ್ಲಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಸಿದ್ದಾರೆ ಎನ್ನಲಾಗಿದೆ. ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದೇವರಾಜು ಅವರು ಪುಷ್ಪಾ (Yash mother Pushpa) ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಆದೇಶದ ಮೇರೆಗೆ ಹಾಸನದ ವಿದ್ಯಾನಗರದಲ್ಲಿರುವ ಪುಷ್ಪಾ ಅವರ ಮನೆಯ ಕಾಂಪೌಂಡ್ ತೆರವುಗೊಳಿಸಲಾಗಿದೆ. ಅಕ್ರಮವಾಗಿ ಕಟ್ಟಿದ್ದ ಗೋಡೆಯನ್ನು ಜಿಪಿಎ ಹೋಲ್ಡರ್ ತೆರವುಗೊಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಸಿನಿಮಾ, ಹಣಕಾಸಿನ ವ್ಯವಹಾರ, ಜಮೀನು ಮುಂತಾದ ವಿಚಾರಗಳಿಗೆ ಸಂಬಂಧಿಸಿದಂತೆ ಈ ಮೊದಲು ಕೂಡ ಪುಷ್ಪಾ ಅರುಣ್ಕುಮಾರ್ (Pushpa Arunkumar) ಅವರು ವಿವಾದ ಮಾಡಿಕೊಂಡಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

