ಭೂ ಒತ್ತುವರಿ ಆರೋಪ: ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ

Updated on: Jan 04, 2026 | 11:25 AM

ಹಾಸನದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರ ವಿರುದ್ಧ ಭೂ ಒತ್ತುವರಿ ಆರೋಪ ಇದೆ. ​ಲಕ್ಷ್ಮಮ್ಮ ಎಂಬುವವರ ಜಾಗದಲ್ಲಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಸಿದ್ದಾರೆ ಎನ್ನಲಾಗಿದೆ. ​ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದೇವರಾಜು ಅವರು ಪುಷ್ಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.

ಹಾಸನದಲ್ಲಿ ನಟ ಯಶ್ (Yash) ತಾಯಿ ಪುಷ್ಪಾ ಅವರ ವಿರುದ್ಧ ಭೂಒತ್ತುವರಿ ಆರೋಪ ಇದೆ. ​ಲಕ್ಷ್ಮಮ್ಮ ಎಂಬುವವರ ಜಾಗದಲ್ಲಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಸಿದ್ದಾರೆ ಎನ್ನಲಾಗಿದೆ. ​ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದೇವರಾಜು ಅವರು ಪುಷ್ಪಾ (Yash mother Pushpa) ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್​ ಆದೇಶದ ಮೇರೆಗೆ ಹಾಸನದ ವಿದ್ಯಾನಗರದಲ್ಲಿರುವ ಪುಷ್ಪಾ ಅವರ ಮನೆಯ ಕಾಂಪೌಂಡ್ ತೆರವುಗೊಳಿಸಲಾಗಿದೆ. ಅಕ್ರಮವಾಗಿ ಕಟ್ಟಿದ್ದ ಗೋಡೆಯನ್ನು ಜಿಪಿಎ ಹೋಲ್ಡರ್ ತೆರವುಗೊಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಸಿನಿಮಾ, ಹಣಕಾಸಿನ ವ್ಯವಹಾರ, ಜಮೀನು ಮುಂತಾದ ವಿಚಾರಗಳಿಗೆ ಸಂಬಂಧಿಸಿದಂತೆ ಈ ಮೊದಲು ಕೂಡ ಪುಷ್ಪಾ ಅರುಣ್​ಕುಮಾರ್ (Pushpa Arunkumar) ಅವರು ವಿವಾದ ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More