AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

Yash mother Pushpa: ನಟ ಯಶ್ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ ಮಾತುಕತೆ ನಡೆಸಿದ್ದಾರೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
Yash Mother Pushpa1
ಮಂಜುನಾಥ ಸಿ.
|

Updated on:Jan 10, 2026 | 2:53 PM

Share

ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ ಮಾತುಕತೆ ನಡೆಸಿದ್ದಾರೆ.

ಹಾಸನ ನಗರದ ವಿದ್ಯಾನಗರದಲ್ಲಿರುವ ಪುಷ್ಪ ಅವರ ಮನೆಯ ಕೌಂಪೌಂಡ್‌ ಅನ್ನು ವ್ಯಕ್ತಿಯೊಬ್ಬರು ವಾರದ ಹಿಂದೆ ಜೆಸಿಬಿ ಬಳಸಿ ನೆಲಸಮಗೊಳಿಸಿದ್ದರು. ಕೋರ್ಟ್ ಅನುಮತಿಯ ಮೇರೆಗೆ ತಾವು ಕಾಂಪೌಂಡ್ ಅನ್ನು ತೆರವುಗೊಳಿಸಿರುವುದಾಗಿ ಅವರು ಹೇಳಿದ್ದರು. ಆದರೆ ಪುಷ್ಪ ಅವರ ಪರ ವಕೀಲರು, ವಿವಾದಿತ ಸ್ಥಳ ಪುಷ್ಪ ಅವರಿಗೇ ಸೇರಿದ್ದು, ಯಾವುದೇ ಕೋರ್ಟ್ ಅನುಮತಿ ಇಲ್ಲದೆ ಕಾಂಪೌಂಡ್ ಅನ್ನು ನೆಲಸಮ ಮಾಡಿದ್ದಾರೆ. ಇದರ ವಿರುದ್ಧ ದಾವೆ ಹೂಡಲಿದ್ದೇವೆ ಎಂದಿದ್ದರು.

ಇದೀಗ ಪೊಲೀಸ್ ಠಾಣೆಗೆ ಭೇಟಿ ನೀಡಿರುವ ಪುಷ್ಪ, ಅವರು ತಮ್ಮ ಸಂಬಂಧಿ ತಮ್ಮ ಪರವಾಗಿ ನೀಡಿದ್ದ ದೂರಿನ ಕುರಿತಾಗಿ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾರೆ. ತಾವು ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಅಕ್ರಮವಾಗಿ ನಮ್ಮ ಸ್ಥಳದಲ್ಲಿ ಜೆಸಿಬಿ ನುಗ್ಗಿಸಿ ನಮ್ಮ ಕಾಂಪೌಂಡ್ ಅನ್ನು ನೆಲಸಮಗೊಳಿಸಿದ್ದಾರೆ. ಈ ಬಗ್ಗೆ ದೂರು ಸಹ ನೀಡಲಾಗಿದ್ದು, ದೂರಿಗೆ ತೆಗೆದುಕೊಂಡಿರುವ ಪ್ರಕ್ರಿಯೆ ಏನು ಎಂದು ಪುಷ್ಪ ಅವರು ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ: ಲಾಯರ್ ಮೊದಲ ಪ್ರತಿಕ್ರಿಯೆ

1500 ಅಡಿಗಳ ಜಾಗಕ್ಕೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಕೆಡವಿದ್ದಾರೆ. ದೇವರಾಜ್ ಹೇಳಿರುವಂತೆ ಸದರಿ ಸ್ಥಳ ಲಕ್ಷ್ಮಮ್ಮ ಎಂಬುವರಿಗೆ ಸೇರಿದ್ದಾಗಿದ್ದು, ಪ್ರಸ್ತುತ ಅವರು (ದೇವರಾಜ್) ಆ ಸ್ಥಳದ ಜಿಪಿಎ ಮಾಲೀಕರು ಎಂದು ಹೇಳಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾವು ಕಾಂಪೌಂಡ್ ಕೆಡವಿದ್ದಾಗಿ ಹೇಳಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sat, 10 January 26

ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ