‘ಟಾಕ್ಸಿಕ್ ನೋಡಿದವರು ವಾಟ್​ ದ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’; ಯಶ್

Updated on: Jul 28, 2026 | 10:43 AM

ಸ್ಯಾನ್ ಡಿಯಾಗೋ ಕಾಮಿಕ್-ಕಾನ್‌ನಲ್ಲಿ ನಟ ಯಶ್ ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಚಿತ್ರವು ಆಕ್ಷನ್ ಮಾತ್ರವಲ್ಲದೆ ಆಳವಾದ ಭಾವನಾತ್ಮಕ ಕಥೆಯನ್ನೂ ಹೊಂದಿದೆ ಎಂದಿರುವ ಅವರು, ಹಾಲವುಡ್ ಶೈಲಿಯ ಸಾಹಸ ದೃಶ್ಯಗಳಿಗಾಗಿ ಖ್ಯಾತ ಆಕ್ಷನ್ ಡೈರೆಕ್ಟರ್ ಜೆಜೆ ಪೆರ್ರಿ ಜೊತೆ ಕೈಜೋಡಿಸಿರುವುದಾಗಿ ತಿಳಿಸಿದ್ದು, ಸಿನಿಮಾ ಪ್ರೇಕ್ಷಕರಿಗೆ ಅದ್ಭುತ ಅನುಭವ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ಯಾನ್ ಡಿಯಾಗೋ ಕಾಮಿಕ್-ಕಾನ್‌ನಲ್ಲಿ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ನಟ ಯಶ್ ಅವರು ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಾಕ್ಸಿಕ್ ಟೀಸರ್​​ನ ಅದ್ಭುತ ಯಶಸ್ಸಿನ ಬಗ್ಗೆ ಪ್ರಸ್ತಾಪಿಸಿದಾಗ, ಯಶ್ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ‘ಟಾಕ್ಸಿಕ್ ಸಿನಿಮಾ ಪ್ರೇಕ್ಷಕರಿಗೆ ಒಂದು ರೋಲರ್ ಕೋಸ್ಟರ್ ರೈಡ್ ಇದ್ದಂತೆ ಇರಲಿದೆ. ಇದು ತುಂಬಾನೇ ವೈಲ್ಡ್ ಆಗಿದ್ದು, ಎಲ್ಲರ ಮನಸೂರೆಗೊಳ್ಳಲಿದೆ’ ಎಂದು ಯಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಮೇಲ್ನೋಟಕ್ಕೆ ಇದು ಒಂದು ದೊಡ್ಡ ಮಟ್ಟದ ಆಕ್ಷನ್ ಸಿನಿಮಾದಂತೆ ಕಂಡರೂ, ಸಿನಿಮಾದ ಒಳಗೆ ಆಳವಾದ ಭಾವನಾತ್ಮಕ ಕಥೆಯಿದೆ ಎಂದು ತಿಳಿಸಿದ್ದಾರೆ. ಥಿಯೇಟರ್‌ನಿಂದ ಹೊರಬರುವಾಗ ಪ್ರೇಕ್ಷಕರು ಖಂಡಿತವಾಗಿಯೂ ಬೆರಗಾಗುತ್ತಾರೆ. ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತಾರೆ’ ಎಂದಿದ್ದಾರೆ ಯಶ್.

ತಮಗೆ ಮೊದಲಿನಿಂದಲೂ ಆಕ್ಷನ್ ಸಿನಿಮಾಗಳೆಂದರೆ ಇಷ್ಟ ಎಂದು ಹೇಳಿದ ಯಶ್, ಈ ಚಿತ್ರಕ್ಕಾಗಿ ಖ್ಯಾತ ಆಕ್ಷನ್ ಡೈರೆಕ್ಟರ್ ಜೆಜೆ ಪೆರ್ರಿ (ಅವರೊಂದಿಗೆ ಕೆಲಸ ಮಾಡಿರುವುದಾಗಿ ತಿಳಿಸಿದ್ದಾರೆ. ಜಾನ್ ವಿಕ್ ಅಂತಹ ಹಾಲಿವುಡ್ ಸಿನಿಮಾಗಳ ಆಕ್ಷನ್‌ನಿಂದ ಪ್ರೇರಿತರಾಗಿ ಈ ಚಿತ್ರದಲ್ಲೂ ಅತ್ಯುನ್ನತ ಗುಣಮಟ್ಟದ ಆಕ್ಷನ್ ದೃಶ್ಯಗಳನ್ನು ಅಳವಡಿಸಲಾಗಿದೆ. ಕೇವಲ ಆಕ್ಷನ್ ಮಾತ್ರವಲ್ಲದೆ, ಆ ದೃಶ್ಯಗಳ ಹಿಂದೆ ಬಲವಾದ ಭಾವನಾತ್ಮಕ ಹಿನ್ನೆಲೆಯೂ ಇರಲಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More