ಹೈದರಾಬಾದ್ ಮೆಟ್ರೋದಲ್ಲಿ ‘ಟಾಕ್ಸಿಕ್’ ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ

Updated on: Aug 20, 2026 | 11:47 AM

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಭರ್ಜರಿ ಪ್ರಚಾರ ಹೈದರಾಬಾದ್ ಮೆಟ್ರೋದಲ್ಲಿ ಜೋರಾಗಿ ನಡೆದಿದೆ. ಸಂಪೂರ್ಣ ಮೆಟ್ರೋ ರೈಲಿಗೆ ಚಿತ್ರದ ಮಾಸ್ ಪೋಸ್ಟರ್‌ಗಳನ್ನು ವ್ರ್ಯಾಪ್ ಮಾಡಲಾಗಿದ್ದು, ಪ್ರಯಾಣಿಕರ ಗಮನ ಸೆಳೆಯುತ್ತಿದೆ. ಆಗಸ್ಟ್ 26 ರಂದು 'ಟಾಕ್ಸಿಕ್' ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

‘ಕೆಜಿಎಫ್’ ಸರಣಿಯ ಬ್ಲಾಕ್ ಬಸ್ಟರ್ ಜಯದ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’  ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗ ದೇಶಾದ್ಯಂತ ಚಿತ್ರದ ಭರ್ಜರಿ ಪ್ರಚಾರ ಕಾರ್ಯಗಳು ಜೋರಾಗಿ ನಡೆಯುತ್ತಿದ್ದು, ತೆಲಂಗಾಣದ ಹೈದರಾಬಾದ್‌ನಲ್ಲಿ ‘ಟಾಕ್ಸಿಕ್’ ಸಿನಿಮಾದ ಜಬರ್ದಸ್ತ್ ಹವಾ ಕಂಡುಬಂದಿದೆ.

ಹೈದರಾಬಾದ್ ಮೆಟ್ರೋ ರೈಲಿನ ಸಂಪೂರ್ಣ ಹೊರಭಾಗಕ್ಕೆ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್‌ಗಳನ್ನು ವ್ರ್ಯಾಪ್ (Wrap) ಮಾಡುವ ಮೂಲಕ ವಿನೂತನ ಶೈಲಿಯಲ್ಲಿ ಪ್ರಚಾರ ಕೈಗೊಳ್ಳಲಾಗಿದೆ. ಮೆಟ್ರೋ ನಿಲ್ದಾಣಗಳಿಗೆ ರೈಲು ಆಗಮಿಸುತ್ತಿದ್ದಂತೆ ಪ್ರಯಾಣಿಕರು ಹಾಗೂ ಅಭಿಮಾನಿಗಳು ಅಚ್ಚರಿಯಿಂದ ಕಣ್ಣರಳಿಸಿ ನೋಡುತ್ತಿದ್ದಾರೆ. ಯಶ್ ಅವರ ಮಾಸ್ ಲುಕ್, ಬೋಲ್ಡ್ ಆಕ್ಷನ್ ಪೋಸ್ಟರ್‌ಗಳು ಮತ್ತು ಬಿಡುಗಡೆ ದಿನಾಂಕ ಪ್ರದರ್ಶನಗೊಂಡಿರುವ ಈ ಮೆಟ್ರೋ ರೈಲು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗುತ್ತಿದೆ.

ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಆಕ್ಷನ್ ಥ್ರಿಲ್ಲರ್ ಬಿಗ್ ಬಜೆಟ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮೊನ್ಸ್ಟಾರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಸಿನಿಮಾವು ವಿಶ್ವದಾದ್ಯಂತ ಆಗಸ್ಟ್ 26, 2026 ರಂದು ಅದ್ಧೂರಿಯಾಗಿ ಚಿತ್ರಮಂದಿರಗಳಿಗೆ ಅಪ್ಪಳಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More