ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ

Updated on: Oct 30, 2024 | 9:11 AM

‘ರಾಕಿಂಗ್ ಸ್ಟಾರ್’ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರದ ಸೆಟ್​ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಟ್ ಹಾಕಿದ ಜಾಗ ಹೇಗಿತ್ತು ಎಂಬುದನ್ನು ನೋಡಿ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕಿದ ವಿಚಾರ ಸಾಕಷ್ಟು ಚರ್ಚೆಯಲ್ಲಿ ಇದೆ. ಬೆಂಗಳೂರಿನ ಹೊರ ವಲಯದಲ್ಲಿರುವ ಪ್ರದೇಶದಲ್ಲಿ ಸೆಟ್ ಹಾಕಲಾಗಿತ್ತು. ಈ ಸೆಟ್ ಹಾಕಲು ಮರ ಕಡಿಯಲಾಗಿದೆ ಎನ್ನುವ ಆರೋಪ ಇದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಸೆಟ್​ ಹಾಕಿದ ಜಾಗ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More