AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಸಿನಿಮಾ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್

ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಸಿನಿಮಾ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್

ಮಾಲತೇಶ ಜಗ್ಗೀನ್
| Edited By: |

Updated on: Aug 25, 2026 | 10:45 PM

Share

‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಮೂಲಕ ಅಭಿಮಾನಿಗಳಿಗೆ ದೊಡ್ಡ ಪರದೆ ಮೇಲೆ ದರ್ಶನ ನೀಡಲು ಬಂದಿದ್ದಾರೆ. ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆಗೆ ‘ಟಾಕ್ಸಿಕ್’ ಶೋ ಆರಂಭ ಆಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ಜನರು ಉತ್ಸುಕರಾಗಿದ್ದಾರೆ.

‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಅವರು ‘ಟಾಕ್ಸಿಕ್’ (Toxic) ಸಿನಿಮಾ ಮೂಲಕ ಅಭಿಮಾನಿಗಳಿಗೆ ದೊಡ್ಡ ಪರದೆ ಮೇಲೆ ದರ್ಶನ ನೀಡಲು ಬಂದಿದ್ದಾರೆ. ಈ ಸಿನಿಮಾದ ಮೇಲಿರುವ ಕ್ರೇಜ್ ಅಷ್ಟಿಷ್ಟಲ್ಲ. ಗೀತು ಮೋಹನ್​ದಾಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ, ಹುಮಾ ಖುರೇಷಿ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆಗೆ ‘ಟಾಕ್ಸಿಕ್’ ಶೋ ಆರಂಭ ಆಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ಜನರು ಉತ್ಸುಕರಾಗಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಚಿತ್ರಮಂದಿರಗಳ ಎದುರಲ್ಲಿ ಯಶ್ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಅಬ್ಬರಿಸುತ್ತಿದೆ. ಮೊದಲ ದಿನ ಅಂದಾಜು 50 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಬಹುದು ಎಂಬ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More