AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋದಲ್ಲಿ ರಾರಾಜಿಸುತ್ತಿದೆ 'ಟಾಕ್ಸಿಕ್' ಪೋಸ್ಟರ್; ಯಶ್ ಅಭಿಮಾನಿಗಳಿಗೆ ಹಬ್ಬ

ಬೆಂಗಳೂರು ಮೆಟ್ರೋದಲ್ಲಿ ರಾರಾಜಿಸುತ್ತಿದೆ ‘ಟಾಕ್ಸಿಕ್’ ಪೋಸ್ಟರ್; ಯಶ್ ಅಭಿಮಾನಿಗಳಿಗೆ ಹಬ್ಬ

ರಾಜೇಶ್ ದುಗ್ಗುಮನೆ
|

Updated on: Aug 13, 2026 | 8:51 AM

Share

ಟಾಕ್ಸಿಕ್ ಸಿನಿಮಾದ ರಿಲೀಸ್​ಗೆ ದಿನಗಣನೆ ಶುರುವಾಗಿದೆ. ಇನ್ನೇನು ಸಿನಿಮಾದ ಬುಕಿಂಗ್ ಕೂಡ ಓಪನ್ ಆಗುವ ನಿರೀಕ್ಷೆ ಇದೆ. ಹೀಗಿರುವಾಗಲೇ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್ ಮೆಟ್ರೋದಲ್ಲಿ ರಾರಾಜಿಸಿದೆ. ಬೆಂಗಳೂರು ಮೆಟ್ರೋಗಳು ಟಾಕ್ಸಿಕ್ ಪೋಸ್ಟರ್ ಹಿಡಿದು ಚಲಿಸುತ್ತಿವೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಕಾರ್ಯಗಳು ರಾಜಧಾನಿ ಬೆಂಗಳೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಆರಂಭವಾಗಿವೆ. ನಮ್ಮ ಮೆಟ್ರೋ ರೈಲುಗಳ ಮೇಲೆ ‘ಟಾಕ್ಸಿಕ್’ ಚಿತ್ರದ ಪೋಸ್ಟರ್‌ಗಳನ್ನು ಹಾಗೂ ಬ್ರ್ಯಾಂಡಿಂಗ್‌ ಅನ್ನು ಅಳವಡಿಸಲಾಗಿದ್ದು, ಈಗ ನಗರದಲ್ಲೆಲ್ಲಾ ‘ಟಾಕ್ಸಿಕ್’ದ್ದೇ ಹವಾ ಎದ್ದಿದೆ.

ಬೆಂಗಳೂರು ಮೆಟ್ರೋದ ಒಳಭಾಗ ಮತ್ತು ಹೊರಭಾಗಕ್ಕೆ ‘ಟಾಕ್ಸಿಕ್’ ಚಿತ್ರದ ಮಾಸ್ ಪೋಸ್ಟರ್‌ಗಳು ಮತ್ತು ಯಶ್ ಅವರ ವಿಭಿನ್ನ ಲುಕ್‌ಗಳ ಬ್ಯಾನರ್‌ಗಳನ್ನು ಹಚ್ಚಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮ್ಯಾನ್‌ಸ್ಟರ್ ಮೈಂಡ್ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಬಿಗ್ ಬಜೆಟ್ ಸಿನಿಮಾದ ಪ್ರಚಾರದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಮೆಟ್ರೋದಲ್ಲಿ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಯಶ್ ಅಭಿಮಾನಿಗಳು ಈ ಪ್ರಚಾರ ಶೈಲಿಯನ್ನು ಕಂಡು ಫಿದಾ ಆಗಿದ್ದು, ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ‘ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಎಂಬ ಅಡಿಬರಹ ಹೊಂದಿರುವ ಈ ಸಿನಿಮಾ, 2026ರ ಆಗಸ್ಟ್ 26ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us