ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್

Edited By:

Updated on: Aug 14, 2026 | 8:46 PM

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಿದೆ. ಯಶ್ ನಟನೆಯ ಈ ಚಿತ್ರಕ್ಕೆ ಮೋಹನ್ ಬಿ. ಕೆರೆ ಅವರು ಕಲಾ ನಿರ್ದೇಶನ ಮಾಡಿದ್ದಾರೆ. ತಮಗೆ ಈ ಅವಕಾಶ ಸಿಕ್ಕಿದ್ದಕ್ಕೆ ಅವರು ಖುಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೋಹನ್ ಬಿ. ಕೆರೆ ಅವರು ‘ಟಾಕ್ಸಿಕ್’ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದರು.

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಿದೆ. ಯಶ್ ನಟನೆಯ ಈ ಚಿತ್ರಕ್ಕೆ ಮೋಹನ್ ಬಿ. ಕೆರೆ ಅವರು ಕಲಾ ನಿರ್ದೇಶನ ಮಾಡಿದ್ದಾರೆ. ತಮಗೆ ಈ ಅವಕಾಶ ಸಿಕ್ಕಿದ್ದಕ್ಕೆ ಅವರು ಖುಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೋಹನ್ ಬಿ. ಕೆರೆ ಅವರು ‘ಟಾಕ್ಸಿಕ್’ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದರು. ಆ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಈ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದ್ದೆವು. ನಾನು ಬಿಟ್ಟುಕೊಡಲು ಸಾಧ್ಯವಾಗದ ರಹಸ್ಯಗಳು ಸಾಕಷ್ಟು ಇವೆ. ಸಿನಿಮಾ ಎಂಬುದೇ ಒಂದು ಕುತೂಹಲ. ಅದನ್ನು ನಾವು ಚಿತ್ರಮಂದಿರಕ್ಕೆ ಬಂದು ಎಂಜಾಯ್ ಮಾಡಬೇಕು. ಬೆಂಗಳೂರಿನಲ್ಲಿ ಈ ಸಿನಿಮಾಗೆ 10ಕ್ಕೂ ಅಧಿಕ ಸೆಟ್ ಹಾಕಿದ್ದೆವು. ಅದಕ್ಕಾಗಿ ಅಂದಾಜು 75 ಕೋಟಿ ರೂಪಾಯಿ ತನಕ ಖರ್ಚು ಆಗಿದೆ’ ಎಂದು ಅವರು ಹೇಳಿದ್ದಾರೆ. ಒಟ್ಟಾರೆಯಾಗಿ ಸೆಟ್ ನಿರ್ಮಾಣದ ಕೆಲಸ ಹೇಗೆ ನಡೆಯಿತು ಎಂಬುದನ್ನು ಮೋಹನ್ ಬಿ. ಕೆರೆ ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 14, 2026 08:45 PM
Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More