‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಹೇಗಿತ್ತು? ಇಲ್ಲಿದೆ ವಿಡಿಯೋ
ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ‘ಕೆಜಿಎಫ್ 2’ ರಿಲೀಸ್ ಆಗಿ ಎರಡೂವರೆ ವರ್ಷಗಳ ಬಳಿಕ ಅವರು ಈ ಸಿನಿಮಾದ ಕೆಲಸ ಆರಂಭಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ. ಲೈಟ್ ಬಾಯ್ ಬಳಿ ಕ್ಲ್ಯಾಪ್ ಮಾಡಿಸಿ ತಂತ್ರಜ್ಞರು ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ಯಶ್ ತೋರಿಸಿದ್ದಾರೆ.
‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರ ಅಂತ್ಯದಲ್ಲಿ ಅನೌನ್ಸ್ ಆಯಿತು. ಈಗ ಈ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಬೆಂಗಳೂರಿನ ಹೊರವಲಯದಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಅಲ್ಲಿಯೇ ಸಿನಿಮಾದ ಮುಹೂರ್ತ ನಡೆದಿದೆ. ಸಾಮಾನ್ಯವಾಗಿ ಮುಹೂರ್ತ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಆಗಮಿಸುತ್ತಾರೆ. ಆದರೆ, ‘ಟಾಕ್ಸಿಕ್’ ತಂಡ ಯಾರಿಗೂ ಆಹ್ವಾನ ನೀಡಿರಲಿಲ್ಲ. ಕೇವಲ ಚಿತ್ರತಂಡದವರು ಮಾತ್ರ ಇದ್ದರು. ಲೈಟ್ ಬಾಯ್ ಬಳಿ ‘ಟಾಕ್ಸಿಕ್’ ಸಿನಿಮಾಗೆ ಕ್ಲ್ಯಾಪ್ ಮಾಡಿಸಲಾಯಿತು. ನಿರ್ದೇಶಕಿ ಗೀತು ಮೋಹನ್ದಾಸ್, ನಿರ್ಮಾಪಕ ವೆಂಕಟ್ ನಾರಾಯಣ್ ಮೊದಲಾದವರು ಹಾಜರಿ ಹಾಕಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

