‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಹೇಗಿತ್ತು? ಇಲ್ಲಿದೆ ವಿಡಿಯೋ

Updated on: Aug 08, 2024 | 12:48 PM

ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ‘ಕೆಜಿಎಫ್ 2’ ರಿಲೀಸ್ ಆಗಿ ಎರಡೂವರೆ ವರ್ಷಗಳ ಬಳಿಕ ಅವರು ಈ ಸಿನಿಮಾದ ಕೆಲಸ ಆರಂಭಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ. ಲೈಟ್ ಬಾಯ್ ಬಳಿ ಕ್ಲ್ಯಾಪ್ ಮಾಡಿಸಿ ತಂತ್ರಜ್ಞರು ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ಯಶ್ ತೋರಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರ ಅಂತ್ಯದಲ್ಲಿ ಅನೌನ್ಸ್ ಆಯಿತು. ಈಗ ಈ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಬೆಂಗಳೂರಿನ ಹೊರವಲಯದಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಅಲ್ಲಿಯೇ ಸಿನಿಮಾದ ಮುಹೂರ್ತ ನಡೆದಿದೆ. ಸಾಮಾನ್ಯವಾಗಿ ಮುಹೂರ್ತ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಆಗಮಿಸುತ್ತಾರೆ. ಆದರೆ, ‘ಟಾಕ್ಸಿಕ್’ ತಂಡ ಯಾರಿಗೂ ಆಹ್ವಾನ ನೀಡಿರಲಿಲ್ಲ. ಕೇವಲ ಚಿತ್ರತಂಡದವರು ಮಾತ್ರ ಇದ್ದರು. ಲೈಟ್ ಬಾಯ್ ಬಳಿ ‘ಟಾಕ್ಸಿಕ್’ ಸಿನಿಮಾಗೆ ಕ್ಲ್ಯಾಪ್ ಮಾಡಿಸಲಾಯಿತು. ನಿರ್ದೇಶಕಿ ಗೀತು ಮೋಹನ್​ದಾಸ್, ನಿರ್ಮಾಪಕ ವೆಂಕಟ್ ನಾರಾಯಣ್ ಮೊದಲಾದವರು ಹಾಜರಿ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More