‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ..
ಹೈದರಾಬಾದ್ನಲ್ಲಿ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ಒಂದು ಅವಘಡ ಸಂಭವಿಸಿದೆ. ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಸೌಂಡ್ ಬಾಕ್ಸ್ ಬಿದ್ದಿದೆ. ಈ ವೇಳೆ ಅಲ್ಲಿ ನೆರೆದಿದ್ದ ಜನರಿಗೆ ಗಾಯ ಆಗಿದೆ. ಒಟ್ಟು ನಾಲ್ಕು ಜನರಿಗೆ ಗಾಯವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಬಹಳ ಅದ್ದೂರಿಯಾಗಿ ‘ಟಾಕ್ಸಿಕ್’ (Toxic) ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಯಶ್ ಹಾಗೂ ಚಿತ್ರತಂಡದ ಇತರೆ ಸದಸ್ಯರು ಹಲವು ನಗರಗಳಿಗೆ ತೆರಳಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಬೇಸರದ ಸಂಗತಿ ಏನೆಂದರೆ, ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ಒಂದು ಅವಘಡ ಸಂಭವಿಸಿದೆ. ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಸೌಂಡ್ ಬಾಕ್ಸ್ ಬಿದ್ದಿದೆ. ಈ ವೇಳೆ ಅಲ್ಲಿ ನೆರೆದಿದ್ದ ಜನರಿಗೆ ಗಾಯ ಆಗಿದೆ. ಬಳಿಕ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲ್ಲಾ ರೆಡ್ಡಿ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಹಾಗೂ ಇವೆಂಟ್ ಮ್ಯಾನೇಜರ್ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಒಟ್ಟು ನಾಲ್ಕು ಜನರಿಗೆ ಗಾಯವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

