‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ..

Updated on: Aug 23, 2026 | 3:11 PM

ಹೈದರಾಬಾದ್​ನಲ್ಲಿ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ಒಂದು ಅವಘಡ ಸಂಭವಿಸಿದೆ. ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಸೌಂಡ್​ ಬಾಕ್ಸ್ ಬಿದ್ದಿದೆ. ಈ ವೇಳೆ ಅಲ್ಲಿ ನೆರೆದಿದ್ದ ಜನರಿಗೆ ಗಾಯ ಆಗಿದೆ. ಒಟ್ಟು ನಾಲ್ಕು ಜನರಿಗೆ ಗಾಯವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಬಹಳ ಅದ್ದೂರಿಯಾಗಿ ‘ಟಾಕ್ಸಿಕ್’ (Toxic) ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಯಶ್ ಹಾಗೂ ಚಿತ್ರತಂಡದ ಇತರೆ ಸದಸ್ಯರು ಹಲವು ನಗರಗಳಿಗೆ ತೆರಳಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಬೇಸರದ ಸಂಗತಿ ಏನೆಂದರೆ, ಹೈದರಾಬಾದ್​ನಲ್ಲಿ ‘ಟಾಕ್ಸಿಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ಒಂದು ಅವಘಡ ಸಂಭವಿಸಿದೆ. ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಸೌಂಡ್​ ಬಾಕ್ಸ್ ಬಿದ್ದಿದೆ. ಈ ವೇಳೆ ಅಲ್ಲಿ ನೆರೆದಿದ್ದ ಜನರಿಗೆ ಗಾಯ ಆಗಿದೆ. ಬಳಿಕ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲ್ಲಾ ರೆಡ್ಡಿ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಹಾಗೂ ಇವೆಂಟ್ ಮ್ಯಾನೇಜರ್ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಒಟ್ಟು ನಾಲ್ಕು ಜನರಿಗೆ ಗಾಯವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More