ವಿಡಿಯೋ: ಕುಟುಂಬದೊಟ್ಟಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಶ್

Updated on: Aug 06, 2024 | 5:13 PM

Toxic: ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಯಶ್ ತಮ್ಮ ಕುಟುಂಬದ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ.

ನಟ ಯಶ್, ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕುಟುಂಬದ ಜೊತೆಗೆ ಧರ್ಮಸ್ಥಳ ಮತ್ತು ಇತರೆ ಕೆಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಯಶ್, ರಾಧಿಕಾ ಮತ್ತು ಮಕ್ಕಳ ಜೊತೆಗೆ ಯಶ್ ದೇವಾಲಯಗಳಿಗೆ ಭೇಟಿ ನೀಡಿದ್ದರು. ಸಂಪ್ರದಾಯಿಕ ಉಡುಗೆ ತೊಟ್ಟು ದಂಪತಿಗಳಿಬ್ಬರೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕ ವೆಂಕಟ್ ಅವರು ಸಹ ಯಶ್ ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಯಶ್ ಬಂದಿದ್ದಾರೆಂದು ತಿಳಿದು ಭಾರಿ ಸಂಖ್ಯೆಯ ಜನ ದೇವಸ್ಥಾನದ ಬಳಿ ಸೇರಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More