VIDEO: 4 ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದ ಯಶಸ್ವಿ ಜೈಸ್ವಾಲ್
India vs England 1st Test: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 471 ರನ್ ಕಲೆಹಾಕಿದರೆ, ಇಂಗ್ಲೆಂಡ್ 465 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 364 ರನ್ಗಳಿಗೆ ಆಲೌಟ್ ಆದರು. ಅತ್ತ 371 ರನ್ಗಳ ಗುರಿಯನ್ನು ಇಂಗ್ಲೆಂಡ್ 82 ಓವರ್‌ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿದೆ.
ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಟೀಮ್ ಇಂಡಿಯಾದ ಕಳಪೆ ಫೀಲ್ಡಿಂಗ್. ಏಕೆಂದರೆ ಈ ಪಂದ್ಯದಲ್ಲಿ ಭಾರತೀಯ ಆಟಗಾರರು ಒಟ್ಟು 6 ಕ್ಯಾಚ್ ಕೈಚೆಲ್ಲಿದ್ದರು. ಈ ಆರು ಕ್ಯಾಚ್ಗಳಲ್ಲಿ ನಾಲ್ಕು ಕ್ಯಾಚ್ ಕೈ ಬಿಟ್ಟಿರುವುದು ಯಶಸ್ವಿ ಜೈಸ್ವಾಲ್.
ಮೊದಲ ಇನಿಂಗ್ಸ್ನಲ್ಲಿ ಮೂರು ಕ್ಯಾಚ್ ಕೈ ಬಿಟ್ಟಿದ್ದ ಯಶಸ್ವಿ ದ್ವಿತೀಯ ಇನಿಂಗ್ಸ್ನಲ್ಲಿ ಬೆನ್ ಡಕೆಟ್ ನೀಡಿದ ಕ್ಯಾಚ್ ಕೈ ಚೆಲ್ಲಿದ್ದರು. ಹೀಗೆ ಒಂದೇ ಪಂದ್ಯದಲ್ಲಿ 4 ಕ್ಯಾಚ್ ಡ್ರಾಪ್ ಮಾಡಿ ಹೀನಾಯ ದಾಖಲೆ ಬರೆದರೂ ಯಶಸ್ವಿ ಜೈಸ್ವಾಲ್ಗೆ ಯಾವುದೇ ಪ್ರಾಪಪ್ರಜ್ಞೆ ಕಾಡಿರಲಿಲ್ಲ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.
ಏಕೆಂದರೆ ಒಂದೆಡೆ ಟೀಮ್ ಇಂಡಿಯಾ ಸೋಲಿನತ್ತ ಮುಖ ಮಾಡುತ್ತಿದ್ದರೆ, ಮತ್ತೊಂದಡೆ ಬೌಂಡರಿ ಲೈನ್ನಲ್ಲಿ ಫೀಲ್ಡಿಂಗ್ನಲ್ಲಿದ್ದ ಯಶಸ್ವಿ ಜೈಸ್ವಾಲ್ ಡ್ಯಾನ್ಸ್ ಮಾಡುತ್ತಾ ಪ್ರೇಕ್ಷಕರೊಂದಿಗೆ ಸಂಭ್ರಮಿಸುತ್ತಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯಶಸ್ವಿ ಜೈಸ್ವಾಲ್ ನಡೆಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ನಲ್ಲಿ 471 ರನ್ ಕಲೆಹಾಕಿದರೆ, ಇಂಗ್ಲೆಂಡ್ 465 ರನ್ ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ ತಂಡವು 364 ರನ್ ಗಳಿಸಿ ಆಲೌಟ್ ಆಯಿತು. ಅದರಂತೆ 371 ರನ್ ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 82 ಓವರ್‌ಗಳಲ್ಲಿ 373 ರನ್ ಬಾರಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.