AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್

‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್

ರಾಜೇಶ್ ದುಗ್ಗುಮನೆ
|

Updated on: Nov 05, 2026 | 9:01 AM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಇಂದು ತೆರೆಕಂಡಿದೆ. ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಬೆಳಗ್ಗೆ 6 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಯಶ್ ಅಭಿಮಾನಿಗಳು ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ರಾವಣನಾಗಿ ಯಶ್ ಅವರ ಹೊಸ ಪಾತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದು, ಅಭೂತಪೂರ್ವ ಉತ್ಸಾಹ ವ್ಯಕ್ತಪಡಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ದೇಶಾದ್ಯಂತ ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಇಂದು ಬೆಳಗ್ಗೆ 6 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಸಾವಿರಾರು ಅಭಿಮಾನಿಗಳು ಮುಂಜಾನೆಯಿಂದಲೇ ಥಿಯೇಟರ್ ಮುಂದೆ ಜಮಾಯಿಸಿದ್ದರು.

ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬೃಹತ್ ಕಟೌಟ್‌ಗಳನ್ನು ಅಳವಡಿಸಿ, ಹೂವಿನಿಂದ ಅಲಂಕರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಥಿಯೇಟರ್ ಮುಂಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಅಭಿಮಾನಿಯೊಬ್ಬರು ಮಾತನಾಡಿ, ‘ಯಶ್ ಅವರನ್ನು ನಾವು ಪ್ರೇಮಿಯಾಗಿ ಅಥವಾ ಮಾಸ್ ಹೀರೋ ಆಗಿ ನೋಡಿದ್ದೇವೆ. ಆದರೆ, ರಾವಣನಂತಹ ವಿಭಿನ್ನ ಪಾತ್ರದಲ್ಲಿ ಅವರನ್ನು ನೋಡಲು ಕುತೂಹಲದಿಂದ ಬಂದಿದ್ದೇವೆ’ ಎಂದು ತಿಳಿಸಿದರು. ಯಶ್ ಅವರ ಈ ಹೊಸ ಪ್ರಯತ್ನದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಯಶ್ ರಾವಣನ ಪಾತ್ರವನ್ನು ಹೇಗೆ ನಿಭಾಯಿಸಿದ್ದಾರೆ ಎಂಬುದನ್ನು ನೋಡಲು ಎಲ್ಲರೂ ಕಾತರರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More