AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಟಾಕ್ಸಿಕ್' ಟ್ರೋಲ್ ಮಾಡುತ್ತಿದ್ದವರಿಗೆ ರಾಕಿ ಭಾಯ್ ಅಭಿಮಾನಿಗಳ ಟಾಂಗ್: ಸೋಶಿಯಲ್ ಮೀಡಿಯಾದಲ್ಲಿ ಯಶ್ ಫ್ಯಾನ್ಸ್ ಆರ್ಭಟ

‘ಟಾಕ್ಸಿಕ್’ ಟ್ರೋಲ್ ಮಾಡುತ್ತಿದ್ದವರಿಗೆ ರಾಕಿ ಭಾಯ್ ಅಭಿಮಾನಿಗಳ ಟಾಂಗ್: ಸೋಶಿಯಲ್ ಮೀಡಿಯಾದಲ್ಲಿ ಯಶ್ ಫ್ಯಾನ್ಸ್ ಆರ್ಭಟ

ಅಕ್ಷಯ್​ ಪಲ್ಲಮಜಲು​​
|

Updated on: Aug 26, 2026 | 10:51 AM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಬಿಡುಗಡೆಯು ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೆಲವರು ಚಿತ್ರದ ಬಗ್ಗೆ ನೆಗೆಟಿವ್ ಮಾತುಗಳನ್ನಾಡುತ್ತಿರುವುದಕ್ಕೆ ಅಭಿಮಾನಿಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರೈಲರ್ ನೋಡಿ ಇಡೀ ಸಿನಿಮಾವನ್ನು ನಿರ್ಣಯಿಸುವುದು ತಪ್ಪು, ನೆಗೆಟಿವ್ ವಿಮರ್ಶೆಗಳಿಗೆ ಹಣ ಪಡೆದು ಕೆಲಸ ಮಾಡುವವರ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದಾರೆ. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಎಲ್ಲರೂ ಬೆಂಬಲಿಸಬೇಕೆಂದು ಅವರು ಕರೆ ನೀಡಿದ್ದಾರೆ.

ಬೆಂಗಳೂರು, ಆ.25: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ವಿಶ್ವದಾದ್ಯಂತ ತೆರೆ ಕಂಡಿದ್ದು, ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಸಂಭ್ರಮವನ್ನುಂಟು ಮಾಡಿದೆ. ಆದರೆ, ಕೆಲವರು ಚಿತ್ರದ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಯಶ್ ಅಭಿಮಾನಿಯೊಬ್ಬರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಮೂರು ನಿಮಿಷಗಳ ಟ್ರೈಲರ್ ನೋಡಿ, ಮೂರು ಗಂಟೆಗಳ ಸಿನಿಮಾವನ್ನು ವಿಮರ್ಶಿಸುವುದು ಸರಿಯಲ್ಲ ಎಂದು ಅವರು ಖಂಡಿಸಿದ್ದಾರೆ. ಅಭಿಮಾನಿಗಳು, ಹಣಕ್ಕಾಗಿ ನೆಗೆಟಿವ್ ವಿಮರ್ಶೆಗಳನ್ನು ನೀಡುವವರನ್ನು ಇಲಿಗಳು ಎಂದು ಜರೆದಿದ್ದು, ಅಂತಹವರು ಟಾಕ್ಸಿಕ್ ಹೆಸರನ್ನು ಬಳಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಬಾಸ್ ಯಶ್ ಅವರನ್ನು ಅಲುಗಾಡಿಸಲು ಬಂದವರೆಲ್ಲಾ ಈಗಾಗಲೇ ಉದುರಿ ಹೋಗಿದ್ದಾರೆ. ಬೇರೆ ಇಂಡಸ್ಟ್ರಿಯವರು ಸ್ಯಾಂಡಲ್‌ವುಡ್‌ಗೆ ನಮಸ್ಕಾರ ಮಾಡುವಂತೆ ಮಾಡಿದ್ದು ಯಶ್ ಎಂದು ಅಭಿಮಾನಿ ಹೆಮ್ಮೆಯಿಂದ ಹೇಳಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಕನ್ನಡದವರೇ ಶತ್ರುಗಳಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ನೇರವಾಗಿ ಸ್ಪರ್ಧಿಸುವಂತೆ ನೆಗೆಟಿವ್ ಪ್ರಚಾರ ಮಾಡುವವರಿಗೆ ಸವಾಲು ಹಾಕಿದ್ದಾರೆ. ಚಲನಚಿತ್ರವನ್ನು ನೋಡಿದ ನಂತರವೇ ಅಭಿಪ್ರಾಯ ವ್ಯಕ್ತಪಡಿಸುವಂತೆ ಅವರು ಮನವಿ ಮಾಡಿದ್ದಾರೆ.

ಟಾಕ್ಸಿಕ್​ ಸಿನಿಮಾ ರಿಲೀಸ್​ ಲೈವ್​ ಅಪ್ಡೇಟ್ಸ್​ಗೆ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More