ಶಿಗ್ಗಾವಿ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಪಠಾಣ್ ಒಬ್ಬ ರೌಡಿಶೀಟರ್: ಅಜ್ಜಂಪೀರ್ ಖಾದ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 25, 2024 | 11:25 AM

ಶಿಗ್ಗಾವಿ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿ ಹಣ ವಸೂಲಿ ಮಾಡಿದ್ದಾನೆ, ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಹೋಗಿ ನೋಡಿದರೆ ಅವನ ವಿರುದ್ಧ ದಾಖಲಾದ ಕೇಸ್​ಗಳ ವಿವರ ಸಿಗುತ್ತದೆ ಎಂದು ಖಾದ್ರಿ ಹೇಳುತ್ತಾರೆ.

ತುಮಕೂರು: ಶಿಗ್ಗಾವಿ ಉಪ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಶುರುವಾಗುತ್ತಿದ್ದಂತೆಯೇ ಅಲ್ಲಿನ ಕಾಂಗ್ರೆಸ್ ಶಿಬಿರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ಪಕ್ಷದ ವರಿಷ್ಠರು ಗೆಲ್ಲುವ ಅಭ್ಯರ್ಥಿಯನ್ನು ಬಿಟ್ಟು ಒಬ್ಬ ರೌಡಿಶೀಟರ್​ಗೆ ಟಿಕೆಟ್ ನೀಡಿದ್ದಾರೆ, ತಾನು ರಾಜ್ಯದ ಎಲ್ಲ ನಾಯಕರನ್ನು ಭೇಟಿಯಾದರೂ ಪ್ರಯೋಜನವಾಗಿಲ್ಲ, ಬಿಜೆಪಿ ನಾಯಕರೇ ತನ್ನನ್ನು ಪ್ರಬಲ ಪ್ರತಿಸ್ಪರ್ಧಿ ಎಂದು ಭಾವಿಸಿದ್ದರು ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶಿಗ್ಗಾವಿ ಉಪ ಚುನಾವಣೆಗೆ ಪಠಾಣ್ ಹೆಸರನ್ನು ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ: ಸಿದ್ದರಾಮಯ್ಯ

Published on: Oct 25, 2024 10:27 AM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.