ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳು, ಗುತ್ತಿಗೆದಾರರಿಗೆ ಖಡಕ್​​ ಎಚ್ಚರಿಕೆ ಕೊಟ್ಟ ಸಚಿವ ಯತೀಂದ್ರ

Edited By:

Updated on: Jul 13, 2026 | 7:13 PM

ಕಲಬುರಗಿಯಲ್ಲಿ ಕುಡಿಯುವ ನೀರಿನ ಯೋಜನೆ ವಿಳಂಬ ಮತ್ತು ರಸ್ತೆಗಳ ದುರಸ್ತಿ ಕಾರ್ಯದ ನಿರ್ಲಕ್ಷ್ಯದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರುಗಳಿಗೆ ಪ್ರತಿಕ್ರಿಯಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ವ್ಯವಸ್ಥಿತ ನಂಬರ್‌ಗಳನ್ನು ಒದಗಿಸುವಂತೆ ಕಲಬುರಗಿ ನಗರದ ಜಲಭವನದಲ್ಲಿ ನಡೆದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ.

ಕಲಬುರಗಿ, ಜುಲೈ 13: ನಗರದಲ್ಲಿ ಬಹುನಿರೀಕ್ಷಿತ ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಅರ್ಧಕ್ಕಿಂತ ಹೆಚ್ಚು ಜನರು ಈ ನೀರಿನ ಯೋಜನೆಯ ಮೇಲೆ ಅವಲಂಬಿತರಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕಾಮಗಾರಿಯು ಕಳೆದ ವರ್ಷವೇ ಪೂರ್ಣಗೊಳ್ಳಬೇಕಾಗಿತ್ತು, ಆದರೆ ನಾಲ್ಕು ಬಾರಿ ಗಡುವು ವಿಸ್ತರಣೆಯಾಗಿದ್ದರೂ ಕೆಲಸ ಇನ್ನೂ ಮುಗಿದಿಲ್ಲ. ಗುತ್ತಿಗೆದಾರರಿಗೆ ಈಗಾಗಲೇ ದಂಡ ವಿಧಿಸಿದ್ದರೂ, ಕೆಲಸದ ವೇಗ ಹೆಚ್ಚಾಗಿಲ್ಲ. ನಿರ್ದಿಷ್ಟ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಮತ್ತು ಹಾಳಾದ ರಸ್ತೆಗಳನ್ನು ಪುನಃಸ್ಥಾಪಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಲು, ನೋಂದಾಯಿಸಲು ಮತ್ತು ಅನುಸರಿಸಲು ಒಂದು ವ್ಯವಸ್ಥೆ ರೂಪಿಸಬೇಕು. ಸಾರ್ವಜನಿಕರು ಯಾರನ್ನು, ಎಲ್ಲಿ ಸಂಪರ್ಕಿಸಬೇಕು ಎಂಬುದರ ಕುರಿತು ಮಾಹಿತಿ ಹಾಗೂ ಸಂಖ್ಯೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More