AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ

ಸಚಿವ ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ

ಪ್ರಸನ್ನ ಗಾಂವ್ಕರ್​
| Edited By: |

Updated on: Aug 09, 2026 | 3:51 PM

Share

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ ಸಭಾನಾಯಕ ಸ್ಥಾನ ಒಲಿಯಲಿದೆ.

ಬೆಂಗಳೂರು, (ಆಗಸ್ಟ್​​ 09): ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ ಸಭಾನಾಯಕ ಸ್ಥಾನ ಒಲಿಯಲಿದೆ.

ಇನ್ನು ಆಗಸ್ಟ್ 13 ರಿಂದ ಮಳೆಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಪರಿಷತ್ ನಲ್ಲಿ ಆಡಳಿತ ಪಕ್ಷವನ್ನು ಯತೀಂದ್ರ ಮುನ್ನಡೆಸಲಿದ್ದಾರೆ. ಇನ್ನು ಯತೀಂದ್ರಗೆ ಸಭಾ ನಾಯಕ ಸ್ಥಾನದ ಮೂಲಕ ಸಿದ್ದರಾಮಯ್ಯ ಮುನಿಸು ಕೂಡ ತಣಿಸುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More