ಯತೀಂದ್ರ ಒಬ್ಬ ಸೆನ್ಸಿಬಲ್ ನಾಯಕ, ಅವರ ಹೇಳಿಕೆಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ: ಡಿಕೆ ಶಿವಕುಮಾರ್

ಯತೀಂದ್ರ ಒಬ್ಬ ಸೆನ್ಸಿಬಲ್ ನಾಯಕ, ಅವರ ಹೇಳಿಕೆಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Jan 17, 2024 | 4:24 PM

ರಾಜ್ಯದಲ್ಲಿ ಸರ್ಕಾರ ಬಲಿಷ್ಠವಾಗಿದೆ ಮತ್ತು ಸದೃಢವಾಗಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ನೇತೃತ್ವ ಮತ್ತು ತನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಶಿವಕುಮಾರ್ ಹೇಳಿದರು. ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಯತೀಂದ್ರ ಹೇಳಿದ ಅಂಶ ಶಿವಕುಮಾರ್ ಮಾತಿನಲ್ಲಿ ಪ್ರಸ್ತಾಪ ಆಗೋದೇ ಇಲ್ಲ.

ಬೆಂಗಳೂರು: ನಿನ್ನೆ ಹಾಸನದಲ್ಲಿ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸಿದ್ದರಾಮಯ್ಯನವರೇ (Siddaramaiah) ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅಂತ ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಇದೇ ವಿಷಯವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಪ್ರತಿಕ್ರಿಯೆ ಕೇಳಿದಾಗ, ಯತೀಂದ್ರ ಅವರು ಆಡಿರುವ ಮಾತುಗಳಿಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ, ರಾಜ್ಯದಲ್ಲಿ ಸರ್ಕಾರ ಬಲಿಷ್ಠವಾಗಿದೆ ಮತ್ತು ಸದೃಢವಾಗಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ನೇತೃತ್ವ ಮತ್ತು ತನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಶಿವಕುಮಾರ್ ಹೇಳಿದರು. ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಯತೀಂದ್ರ ಹೇಳಿದ ಅಂಶ ಶಿವಕುಮಾರ್ ಮಾತಿನಲ್ಲಿ ಪ್ರಸ್ತಾಪ ಆಗೋದೇ ಇಲ್ಲ. ಯತೀಂದ್ರ ವಿಷಯದಲ್ಲಿ ಶಿವಕುಮಾರ್, ಅವರೊಬ್ಬ ಸೆನ್ಸಿಬಲ್ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನಾಯಕ, ಪಕ್ಷ ಅವರಿಗೆ ಪ್ರೋತ್ಸಾಹ ನೀಡುತ್ತದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 17, 2024 04:24 PM