ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಡಿ.ಕೆ. ಶಿವಕುಮಾರ್ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ.
ಹೌದು.. ಬೀದರ್ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅವರೇ ಪ್ರತಿಕ್ರಿಯಿಸಿ, ಹೈಕಮಾಂಡ್ ಕೊಟ್ಟ ಭರವಸೆಯನ್ನು ಬಹಿರಂಗಪಡಿಸಿದ್ದಾರೆ.

