ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

Updated on: Jun 01, 2026 | 8:47 PM

ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ.

ಹೌದು.. ಬೀದರ್​ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅವರೇ ಪ್ರತಿಕ್ರಿಯಿಸಿ, ಹೈಕಮಾಂಡ್ ಕೊಟ್ಟ ಭರವಸೆಯನ್ನು ಬಹಿರಂಗಪಡಿಸಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More