ಯತ್ನಾಳ್ ಮತ್ತು ಜಾರಕಿಹೊಳಿ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿ ಸಭೆಯ ಉದ್ದೇಶ ನೆರವೇರಿಸಿದರು: ಬಿವೈ ವಿಜಯೇಂದ್ರ
ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ತನ್ನ ಹೆಗಲ ಮೇಲೆ ಹೊರಿಸಿದ್ದಾರೆ, ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದ ವಿಜಯೇಂದ್ರ ನಮ್ಮ ಪಕ್ಷದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಕೆಡಿಸಿಕೊಳ್ಳುವುದ ಬೇಡ, ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವುದೇ ಪಕ್ಷದ ಎಲ್ಲ ನಾಯಕರ ಗುರಿಯಾಗಿದೆ ಅಂತ ಹೇಳಿದರು.
ಮೈಸೂರು: ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Raghavendra), ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಮತ್ತು ರಮೇಶ್ ಜಾರಕಿಹೊಳಿ (Ramesh Jarkiholi) ಅವರ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡಲಿಲ್ಲ. ಕಳೆದ ವಾರ ಬೆಂಗಳೂರಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆದ ಉದ್ದೇಶ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಿಸುವುದಾಗಿತ್ತು. ಬಸನಗೌಡ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಇಬ್ಬರೂ ಸಭೆಗೆ ಬಂದು ತಮ್ಮ ಅಭಿಪ್ರಾಯಗಳನ್ನು ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿದ್ದ ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ ಕುಮಾರ್ ಗೌತಮ್ ಅವರಿಗೆ ನೀಡಿ ಹೋಗಿದ್ದಾರೆ, ಅವರ ಸಭೆಯಲ್ಲಿ ಪಾಲ್ಗೊಳ್ಳಲಿಲ್ಲ, ಅಷ್ಟೇ ಅಂತ ಹೇಳಿದರು. ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ತನ್ನ ಹೆಗಲ ಮೇಲೆ ಹೊರಿಸಿದ್ದಾರೆ, ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದ ವಿಜಯೇಂದ್ರ ನಮ್ಮ ಪಕ್ಷದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಕೆಡಿಸಿಕೊಳ್ಳುವುದ ಬೇಡ, ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವುದೇ ಪಕ್ಷದ ಎಲ್ಲ ನಾಯಕರ ಗುರಿಯಾಗಿದೆ ಅಂತ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ