ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ, ಸತ್ಯ ಬಿಚ್ಚಿಟ್ಟ ಯತ್ನಾಳ್

Updated on: Dec 06, 2025 | 8:42 PM

ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಕಡಿಮೆ ಸ್ಥಾನ ಬರಲು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಮಾತ್ರ ಕಾರಣವಲ್ಲ, ಬಿಜೆಪಿ ಆಡಳಿತ ವೈಫಲ್ಯ ಮತ್ತು ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ. ಇದರ ಪರಿಣಾಮವಾಗಿ, ಕಾರ್ಯಕರ್ತರು ಪಕ್ಷದಿಂದ ದೂರ ಸರಿದರು ಮತ್ತು ಇದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಯಿತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು, ಡಿ.6: ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಬಿಜೆಪಿ ಕಡಿಮೆ ಸ್ಥಾನ ಬರಲು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಮಾತ್ರ ಕಾರಣವಲ್ಲ, ಬಿಜೆಪಿ ಆಡಳಿತ ವೈಫಲ್ಯ ಮತ್ತು ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಮತನಾಡಿದ ಅವರು ಪರೇಶ್ ಮೇಸ್ತ ಹತ್ಯೆ ಮತ್ತು ಮೈಸೂರು, ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆಗಳು ಮತ್ತು ಕೊಲೆ ಪ್ರಕರಣಗಳಿಂದ ಬಿಜೆಪಿ ಸೋತಿದೆ. ಈ ಘಟನೆಗಳಿಗೆ ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರಿಂದ ಹಿಂದೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದರು ಎಂದು ಯತ್ನಾಳ್ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಕಾರ್ಯಕರ್ತರು ಪಕ್ಷದಿಂದ ದೂರ ಸರಿದರು ಮತ್ತು ಇದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಯಿತು ಎಂದು ಅವರು ಹೇಳಿದ್ದಾರೆ. ಯತ್ನಾಳ್ ಅವರು ವಿಜಯೇಂದ್ರರ ನಿರಂತರ ಪ್ರಚಾರದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಜನರು ತಾವು ಹೇಳಿದಂತೆ ಮತ ಹಾಕುವುದಿಲ್ಲ ಎಂದು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ