ಯತ್ನಾಳ್ ಉಚ್ಚಾಟನೆ ದುರದೃಷ್ಟಕರ, ವಿಶ್ಲೇಷಣೆ ಮಾಡುವ ಗೋಜಿಗೆ ಹೋಗಲ್ಲ: ಸಿಟಿ ರವಿ, ಪರಿಷತ್ ಸದಸ್ಯ
ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಯಾಕೆ ಭೇಟಿಯಾಗಿದ್ದಾರೆಂದು ಅವರೇ ಹೇಳಬೇಕು, ಆದರೆ ಅವರಿಬ್ಬರ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ಮಾತ್ರ ನೋಡಬಾರದು, ಸತೀಶ್ ಜಾರಕಿಹೊಳಿ ರಾಜ್ಯದ ಒಬ್ಬ ಸಚಿವರಾಗಿದ್ದಾರೆ, ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವರನ್ನು ಭೇಟಿಯಾಗಿರಬಹುದು ಎಂದು ಸಿಟಿ ರವಿ ಹೇಳಿದರು.
ಚಿಕ್ಕಮಗಳೂರು, ಮಾರ್ಚ್ 27: ಬಿಜೆಪಿ ರಾಜ್ಯ ಘಟಕದಲ್ಲಿ ರೆಬೆಲ್ ಶಾಸಕ ಎನಿಸಿಕೊಂಡು ರಾಜ್ಯ ನಾಯಕತ್ವಕ್ಕೆ ಪದೇಪದೆ ಸವಾಲು ಹಾಕಿದ್ದ ಬಸನಗೌಡ ಪಾಟೀಲ್ ಯತ್ನಾಳ್ರನ್ನು (Basangouda Patil Yatnal) ಪಕ್ಷದಿಂದ ಉಚ್ಚಾಟಿಸಿರುವುದಕ್ಕೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ನಡೆದಿರುವ ಬೆಳವಣಿಗೆ ದುರದೃಷ್ಟಕರವಾದದ್ದು, ಆದರೆ ತಾನು ವ್ಯಕ್ತಿಗಿಂತ ಪಕ್ಷ ಮತ್ತು ಪಕ್ಷಕ್ಕಿಂತ ದೇಶ ಮುಖ್ಯ ಎಂದು ನಂಬಿರುವವನು, ಉಚ್ಚಾಟನೆ ವಿಷಯವನ್ನು ವಿಶ್ಲೇಷಿಸುವ ಗೋಜಿಗೆ ಹೋಗಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಕರ್ನಾಟಕವು ತಮಿಳುನಾಡನ್ನು ಒಪ್ಪಿಸಿದರೆ ಕೇಂದ್ರ ಕಣ್ಣುಮುಚ್ಚಿ ಅನುಮತಿ ನೀಡುತ್ತದೆ: ರವಿ
Latest Videos

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್

ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ

ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ

ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
