ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟು ಹಂಚಿಕೆಯಾಗಿದೆ ಅಂತ ಯಡಿಯೂರಪ್ಪ ಹೇಳಿದ್ದರು: ಪ್ರದೀಪ್ ಈಶ್ವರ್

Updated on: Jul 15, 2024 | 1:05 PM

ಇಂದು ಆರಂಭವಾಗಿರುವ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯ ಸರ್ಕಾರದ ಮೇಲೆ ದಾಳಿ ನಡೆಸಲು ಹಲವಾರು ಅಸ್ತ್ರಗಳನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದಾರೆ ಮತ್ತು ಅವುಗಳಲ್ಲೊಂದು ಮುಡಾ ಹಗರಣ. ಅದರೆ, ದಾಳಿ ಎದುರಿಸಲೂ ತಮ್ಮ ಬತ್ತಳಿಕೆಯಲ್ಲೂ ಅಸ್ತ್ರಗಳಿವೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಹೇಳಿದ್ದಾರೆ.

ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಆರಂಭಗೊಂಡಿದೆ. ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ಅಕ್ರಮವಾಗಿ 14 ನಿವೇಶನನಗಳು ಹಂಚಿಕೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಯ ನೈತಿಕತೆಯನ್ನು ಪ್ರಶ್ನಿಸಿದರು. ವಿಧಾನ ಸೌಧದ ಅವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, 2011ಮಾರ್ಚ್ 17ರಂದು ವಿಧಾನಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ 48ಸೈಟುಗಳು ಮತ್ತು ಈಗ ಕೇಂದ್ರ ಸಚಿವರಾಗಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ 300 X 200ಚದರ ಅಡಿ ಸೈಟು ಹಂಚಿಕೆಯಾಗಿರುವ ಸಂಗತಿಯನ್ನು ಹೇಳಿದ್ದರು. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಅದ್ಯಾವ ನೈತಿಕತೆಯೊಂದಿಗೆ ಪ್ರತಿಭಟನೆ ಮಾಡುತ್ತಾರೆ ಎಂದು ಈಶ್ವರ್ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ರಾ? ರಾಜೀನಾಮೆ ಪತ್ರ ವೈರಲ್!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More