ಹೊಸ ಜವಾಬ್ದಾರಿ ನಿಭಾಯಿಸುವ ಕುರಿತು ವರಿಷ್ಠರಿಂದ ಸಲಹೆ-ಸೂಚನೆ ಪಡೆಯಲು ಯಡಿಯೂರಪ್ಪ ದೆಹಲಿಗೆ ಹೊರಟರು
ಮುಂದಿನ ಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗುವ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ದತ್ತಾತ್ರೇಯ ಹೊಸಬಾಳೆ ಮತ್ತು ರಾಜನಾಥ ಸಿಂಗ್ ಅವರಿಂದ ಸಲಹೆ ಸೂಚನೆಗಳನ್ನು ಪಡೆದು ಶನಿವಾರ ಸಾಯಂಕಾಲ ಬೆಂಗಳೂರಿಗೆ ಹಿಂತಿರುಗುವುದಾಗಿ ಬಿಎಸ್ವೈ ಹೇಳಿದರು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಸಮಿತಿಯ ಸದಸ್ಯ ಬಿಎಸ್ ಯಡಿಯೂರಪ್ಪನವರು (BS Yediyurappa) ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ದೆಹಲಿಗೆ ಹೊರಟರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ವರಿಷ್ಠರು ತಮಗೆ ದೊಡ್ಡ ಜವಾಬ್ದಾರಿಯನ್ನು ಹೊರೆಸಿದ್ದಾರೆ, ಮುಂದಿನ ಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗುವ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah), ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ದತ್ತಾತ್ರೇಯ ಹೊಸಬಾಳೆ ಮತ್ತು ರಾಜನಾಥ ಸಿಂಗ್ ಅವರಿಂದ ಸಲಹೆ ಸೂಚನೆಗಳನ್ನು ಪಡೆದು ಶನಿವಾರ ಸಾಯಂಕಾಲ ಬೆಂಗಳೂರಿಗೆ ಹಿಂತಿರುಗುವುದಾಗಿ ಹೇಳಿದರು.
Latest Videos