ಯಡಿಯೂರಪ್ಪ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾದರು
ಎರಡೂ ನಾಯಕರ ಜೊತೆ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಬಿಎಸ್ ವೈ ಚರ್ಚಿಸಿದರು ಎಂಬ ಮಾಹಿತಿಯಿದೆ.
ನವದೆಹಲಿ: ಶುಕ್ರವಾರ ಬೆಳಗ್ಗೆ ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರು (BS Yediyurappa) ಶನಿವಾರ ಬೆಳಗ್ಗೆ ಪಕ್ಷದ ವರಿಷ್ಠರನ್ನು ಭೇಟಿಯಾದರು. ಇಂದು ಬೆಳಗ್ಗೆ ಅವರಿ ಮೊದಲಿಗೆ ಭೇಟಿಯಾಗಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು. ಬಳಿಕ ಅವರು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಅವರನ್ನು ಭೇಟಿಯಾದರು. ಎರಡೂ ನಾಯಕರ ಜೊತೆ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಬಿಎಸ್ ವೈ ಚರ್ಚಿಸಿದರು ಎಂಬ ಮಾಹಿತಿಯಿದೆ.